ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾದ ಕೆ. ಗೋವಿಂದರಾಜ್ ಹಾಗೂ ನಸೀರ್ ಅಹ್ಮದ್ ಅವರನ್ನು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದು, ಇಬ್ಬರಿಗೂ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.
ಈ ಹಿಂದೆ 2013ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ಕೆ. ಗೋವಿಂದರಾಜ್ ಅವರು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಆಗಿದ್ದರು.
ಈಗ ಎರಡನೇ ಬಾರಿಗೆ ಆ ಹುದ್ದೆಗೆ ನೇಮಕಗೊಂಡಿದ್ದಾರೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ನಸೀರ್ ಅಹ್ಮದ್ ಕೊನೆಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯ ಹುದ್ದೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇಬ್ಬರೂ ಸಿದ್ದರಾಮಯ್ಯನವರ ಆಪ್ತರಾಗಿದ್ದಾರೆ ಎಂಬುದು ಪ್ರಮುಖ ಅಂಶ.