Advertisement
ತಮ್ಮ ವಿರುದ್ಧ ದಾಖಲಾದ ಪ್ರಕರಣದಿಂದಾಗಿ ಪೊಲೀಸ್ ಕ್ಲಿಯರೆನ್ಸ್ ಹಾಗೂ ವೀಸಾ ದೊರೆಯದ ಕಾರಣ ಕ್ರಿಕೆಟ್ ಆಡಲು ಇಂಗ್ಲೆಂಡ್‌ಗೆ ಪ್ರಯಾಣಿಸಲು ಅಡ್ಡಿ ಉಂಟಾದ ಹಿನ್ನೆಲೆಯಲ್ಲಿ ಕೆ.ಸಿ. ಕಾರಿಯಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.
ಒದಗಿಸಿಕೊಟ್ಟಿತು ಎಂದು ಮಾಹಿತಿ ನೀಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಕೇವಲ 60 ನಿಮಿಷಗಳಲ್ಲಿ ವೀಸಾ ಒದಗಿಸಿದ ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿಯ ಕ್ರಮಕ್ಕೆ ಹಾಗೂ ಉಪ ಸಾಲಿಸಿಟರ್ ಜನರಲ್ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಅರ್ಜಿ ಇತ್ಯರ್ಥ ಪಡಿಸಿತು. “ಪ್ರೀತಿಸಿ ಮೋಸ ಮಾಡಿದ್ದಾರೆ’ ಎಂದು ಆರೋಪಿಸಿ ಯುವತಿಯೊಬ್ಬಳು ಕ್ರಿಕೆಟಿಗ ಕೆ.ಸಿ ಕಾರಿಯಪ್ಪ ವಿರುದ್ಧ ದೂರು ನೀಡಿದ್ದಳು. ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಮಧ್ಯೆ ವಿದೇಶ ಪ್ರಯಾಣಕ್ಕೆ ಕಾರಿಯಪ್ಪ ಅವರಿಗೆ ನಿರ್ಬಂಧ ಹೇರಲಾಗಿತ್ತು. ಕ್ರಿಕೆಟ್ ಆಡಲು ಇಂಗ್ಲೆಂಡ್‌ಗೆ ಹೋಗಬೇಕಿದ್ದು, ಪೊಲೀಸರ ಕ್ಲಿಯೆರನ್ಸ್ ಸಿಗದೆ ವಿದೇಶ ಪ್ರಯಾಣಕ್ಕೆ ಅಡ್ಡಿಯಾಗುತ್ತಿದೆ ಎಂದು ಕಾರಿಯಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.