Advertisement

ಕೋವಿಡ್ ಸಮಯದ‌ಲ್ಲೂ ಸಾರಿಗೆ ಆದಾಯಕ್ಕೆ ಶ್ಲಾಘನೆ

05:38 PM Feb 19, 2021 | Team Udayavani |

ಕಲಬುರಗಿ: ಕೋವಿಡ್‌-19 ಸಂಕಷ್ಟದ ನಡುವೆಯೂ ಕಳೆದ ವರ್ಷಕ್ಕಿಂತ ಪ್ರಸ್ತುತ ವರ್ಷ ಹೆಚ್ಚಿನ ಸಾರಿಗೆ ಆದಾಯ ಬರಲು ಕಾರಣರಾದ ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲನಾ ಸಿಬ್ಬಂದಿ ಹಾಗೂ ಅಧಿಕಾರಿಗಳ ಪರಿಶ್ರಮವನ್ನು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷಣ ಸಂಗಪ್ಪ ಸವದಿ ಶ್ಲಾಘಿಸಿದರು.

Advertisement

ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಂಸ್ಥೆ ವತಿಯಿಂದ ತಯಾರಿಸಿದ ಸಂಚಾರಿ ಗ್ರಂಥಾಲಯ ವಾಹನವನ್ನು ಕಲಬುರಗಿಯಲ್ಲಿ ಗುರುವಾರ ವೀಕ್ಷಿಸಿ ಅವರು ಮಾತನಾಡಿದರು. ಚಾಲನಾ ಸಿಬ್ಬಂದಿ ಇಂಧನ ಉಳಿತಾಯದಲ್ಲಿ ನಿಟ್ಟಿನಲ್ಲಿ ಶ್ರಮವಹಿಸಿದಲ್ಲಿ ಖರ್ಚು ಕಡಿಮೆ
ಮಾಡಬಹುದಾಗಿದೆ ಎಂದು ಹೇಳಿದರು.

ಸ್ವಂತ ಖರ್ಚಿನಲ್ಲಿ ಚಿನ್ನದ ಪದಕ: ಪ್ರಸ್ತುತ ವರ್ಷ ಅಂದರೆ ಏಪ್ರಿಲ್‌-2020ರಿಂದ ಮಾರ್ಚ್-2021 ರವರೆಗೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ತಲಾ ಒಬ್ಬರಂತೆ ಅತಿ ಹೆಚ್ಚು ಇಂಧನ ಉಳಿತಾಯ (ಕೆಎಂಪಿಎಲ್‌) ಮಾಡಿದ ಚಾಲಕರಿಗೆ ತಮ್ಮ ಸ್ವಂತ ಖರ್ಚಿನಲ್ಲಿ 10 ಗ್ರಾಂ ಚಿನ್ನದ ಪದಕ ನೀಡುವುದಾಗಿ ಅವರು ಘೋಷಿಸಿದರು.

ಚಾಲನಾ ಸಿಬ್ಬಂದಿಗಳನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಈ ಚಿನ್ನದ ಪದಕ ನೀಡುತ್ತಿದ್ದು, ಪದಕ ವಿತರಣಾ ಕಾರ್ಯಕ್ರಮವನ್ನು ಬರುವ ಏಪ್ರಿಲ್ ತಿಂಗಳಲ್ಲಿ ನಿಗದಿಪಡಿಸಲು ಉಪ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು ಸಂಚಾರಿ ಗ್ರಂಥಾಲಯ ವ್ಯವಸ್ಥೆ ಮಾಡಿರುವುದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ವಾಗಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದ ಅವರು, ಈ ನಿಟ್ಟಿನಲ್ಲಿ ಇನ್ನಷ್ಟು ಸಂಚಾರಿ ಗ್ರಂಥಾಲಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ, ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ, ಮಾಜಿ ಶಾಸಕ ಅಮರನಾಥ ಪಾಟೀಲ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೂರ್ಮಾರಾವ್‌ ಎಂ. ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಮತ್ತಿತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next