ಬೆಂಗಳೂರು: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ಖಾಲಿ ಇದ್ದ ಕಿರಿಯ ಪಶು ವೈದ್ಯಕೀಯ ಪರೀಕ್ಷಕರುಗಳ ಹುದ್ದೆ ಭರ್ತಿಗೆ ಅನುಮೋದನೆ ದೊರೆತಿರುವುದಕ್ಕೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ವ್ಯವಸ್ಥಿತ ರೀತಿಯಲ್ಲಿ ಮತ್ತು ಸಮಯಕ್ಕೆ ಸರಿಯಾಗಿ ಪಶುವೈದ್ಯಕೀಯ ಸೇವೆಗಳು ಸಿಗದೇ ಜಾನುವಾರುಗಳಿಗೆ ಹಾಗೂ ರೈತರಿಗೆ ತೊಂದರೆ ಆಗುವುದನ್ನು ತಡೆಗಟ್ಟಲು ಪಶು ಸಂಗೋಪನಾ ಡಿಪ್ಲೊಮಾ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ನನ್ನ ಕನಸು ಇಂದು ನನಸಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 250 ಕಿರಿಯ ಪಶು ವೈದ್ಯಕೀಯ ಪರೀಕ್ಷಕರ(ಪಶು ವೈದ್ಯ ಸಹಾಯಕರ) ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿರುವುದಕ್ಕೆ ಪ್ರಭು ಚವ್ಹಾಣ್ ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ 5 ಪಶು ಸಂಗೋಪನಾ ಡಿಪ್ಲೊಮಾ ಕಾಲೇಜುಗಳಲ್ಲಿ ತೇರ್ಗಡೆಯಾಗಿ ಹೊರಬರುವ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದರು. ನಾನು ಸಚಿವನಾದ ನಂತರ ನಮ್ಮ ಇಲಾಖೆಯಲ್ಲಿನ ಒಂದೊಂದೇ ಸಮಸ್ಯೆ ಬಗೆಹರಿಸುತ್ತಾ ಬಂದಿದ್ದೇನೆ. ಅದರಲ್ಲೂ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಪಶು ವೈದ್ಯಕೀಯ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಉದ್ಯೋಗ ಸಿಗದೇ ನಿರುದ್ಯೋಗಿಗಳಾಗುತ್ತಿರುವುದನ್ನು ಮನಗಂಡು ನಿರುದ್ಯೋಗಿ ಯುವಕರಿಗೆ ನ್ಯಾಯದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದೇನೆ ಎಂದು ಹೇಳಿದರು.
400 ಪಶು ವೈದ್ಯರ ಭರ್ತಿಗೆ ಅನುಮೋದನೆ ದೊರೆತಿದ್ದು, ನೇಮಕಾತಿ ಪ್ರಕ್ರಿಯೆ ಜಾರಿಯಲ್ಲಿದೆ. ಪಶು ವೈದ್ಯಕೀಯ ಡಿಪೋ›ಮಾ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ನಮ್ಮ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಪಶು ವೈದ್ಯಕೀಯ ಪರೀಕ್ಷಕರಾಗಿ ನೇಮಿಸಿಕೊಂಡಲ್ಲಿ ಇಲಾಖೆ ಇನ್ನೂ ಹೆಚ್ಚಿನ ಸೇವೆ ಕೊಡಬಹುದೆಂದು ವಿನಂತಿಸಿಕೊಂಡಿ¨ªೆ. ಸಾರ್ವಜನಿಕ ಹಿತದೃಷ್ಠಿಯಿಂದ ಅಭಿವೃದ್ಧಿ ದೃಷ್ಟಿಯಿಂದ ಮುಖ್ಯಮಂತ್ರಿಗಳು 250 ಹು¨ªೆಗಳ ಭರ್ತಿಗೆ ಅವಕಾಶ ಮಾಡಿಕೊಟ್ಟಿರುತ್ತಾರೆ. ಮುಂದಿನ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಪ್ರಭು ಚವ್ಹಾಣ್ ಸ್ವಷ್ಟಪಡಿಸಿದ್ದಾರೆ.
ಇಲಾಖೆಯಲ್ಲಿ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಗಳು ನಡೆಯುತ್ತಿದ್ದು, ಇಲಾಖೆ ಬಲಗೊಳ್ಳುತ್ತಿದೆ. ಪಶು ಸಂಜೀವಿನಿ ವಾಹನ ಮೂಲಕ ಚಿಕಿತ್ಸಾ ಸೌಲಭ್ಯ, ಪಶು ಸಹಾಯವಾಣಿ, ಸ್ಪೇಷಾಲಿಟಿ ಆಸ್ಪತ್ರೆಗಳ ಸ್ಥಾಪನೆ, ತಜ್ಞ ವೈದ್ಯರ ಸೇವೆ ಮೂಲಕ ಇಲಾಖೆಯಲ್ಲಿ ಇನ್ನು ಉತ್ತಮ ಸೇವೆ ನೀಡಲು ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯದಿಂದಾಗಿ ಸಾಧ್ಯವಾಗಿರುವುದಕ್ಕೆ ಪ್ರಭು ಚವ್ಹಾಣ್ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.