Advertisement

ನೀರಾವರಿ ಯೋಜನೆಗಳಿಗೆ ಅನುಮೋದನೆ: ಶೇಖಾವತ್- ಕಾರಜೋಳ ಮಹತ್ವದ ಭೇಟಿ

05:10 PM Nov 10, 2022 | Team Udayavani |

ನವದೆಹಲಿ : ರಾಜ್ಯ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ರವರು ಗುರುವಾರ ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.

Advertisement

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರ ನಿವಾಸದಲ್ಲಿನಡೆದ ಮಹತ್ವದ ಸಭೆಯಲ್ಲಿ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಅನುಮೋದನೆ ನೀಡುವಂತೆ ಕೋರಲಾಯಿತು.

ಭದ್ರಾ ಮೇಲ್ದಂಡೆ ಯೋಜನೆಯ ಪ್ರಸ್ತಾವನೆ ಹಂತದಲ್ಲಿದ್ದು ಈ ಯೋಜನೆಗೆ ಮುಂದಿನ ಕೇಂದ್ರ ಸಚಿವ ಸಂಪುಟದ ಸಭೆಯಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆಯೆಂದು ಮಾನ್ಯ ಜಲ ಸಂಪನ್ಮೂಲ ಸಚಿವ ಕಾರಜೋಳ ರವರು ಹೇಳಿದ್ದಾರೆ.

ಮಹದಾಯಿ ಯೋಜನೆಯ ಅನುಮೋದನೆ ಶೀಘ್ರದಲ್ಲಿಯೇ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next