ಯಾದಗಿರಿ: ಆತ್ಮ ನಿರ್ಭರ್ ಯೋಜನೆಯಡಿ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಉತ್ತಮ ಸಾಧನೆ ಮಾಡುತ್ತಿದ್ದು, ಯೋಜನೆಯಡಿ ಸ್ವೀಕರಿಸಿದ ಅರ್ಜಿಗಳಲ್ಲಿ ಶೇ.35.53 ರಷ್ಟು ಅರ್ಜಿಗಳಿಗೆಸಾಲ, ಸೌಲಭ್ಯಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಸ್ವನಿ ಯೋಜನೆಯಪರಿಶೀಲನಾ ಸಭೆಯಲ್ಲಿ ಅವರುಮಾತನಾಡಿದರು. ಜಿಲ್ಲೆಗೆ ನಿಗದಿಪಡಿಸಿದ ಒಟ್ಟು 2,505 ಗುರಿಗಳಲ್ಲಿ ಪ್ರಸ್ತುತ ಒಟ್ಟು 2,254 ಅರ್ಜಿಗಳು ವಿವಿಧ ಬ್ಯಾಂಕ್‌ಗಳಿಗೆ ಸ್ವೀಕೃತವಾಗಿದೆ.
ಶಹಾಪುರ ನಗರಸಭೆ ಮತ್ತು ಗುರುಮಠಕಲ್ ಪುರಸಭೆಗಳು ಗುರಿಗಳಗಿಂತ ಹೆಚ್ಚಿಗೆ ಅರ್ಜಿಗಳನ್ನು ಸ್ವೀಕರಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಉಳಿದ ಅರ್ಜಿಗಳಿಗೂ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ಗಳು ಕ್ರಮವಹಿಸುವಂತೆ ಜಿಲ್ಲಾಲೀಡ್ ಬ್ಯಾಂಕ್ ಮ್ಯಾನೇಜರ್‌ಗೆ ಸೂಚಿಸಿದರು.
ಯಾದಗಿರಿ ನಗರಸಭೆ, ಸುರಪುರ, ಕೆಂಭಾವಿ ಮತ್ತು ಕಕ್ಕೇರಾಗಳು ಇನ್ನೂಹೆಚ್ಚಿನ ಅರ್ಜಿಗಳನ್ನು ಸ್ವೀಕರಿಸಿ ಆನ್‌ಲೈನ್ ಮೂಲಕ ಅಪ್‌ಡೆಟ್ ಮಾಡುವಂತೆ ಜಿಲ್ಲೆಯ ನಗರಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು ಮತ್ತು ಮುಖ್ಯಾ ಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.
ಆತ್ಮ ನಿರ್ಭರ್ ಯೋಜನೆಯಡಿ ಗುರಿಗಳಿಗೆ ಯಾವುದೇ ನಿರ್ಬಂಧ ಇಲ್ಲ.ನಿಗದಿಪಡಿಸಿದ ಗುರಿಗಳಿಗಿಂತ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಬಹುದು ಹಾಗೂ ನಗರಸಭೆವ್ಯಾಪ್ತಿಗಳಲ್ಲಿ ಹೆಚ್ಚು ಸಂಖ್ಯೆಯ ಬೀದಿ ವ್ಯಾಪಾರಿಗಳು ಇರುವುದರಿಂದ ಈಗಾಗಲೇ ನಿಗದಿಪಡಿಸಿದ ಗುರಿಗಳಿಗಿಂತ ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ 200 ಮತ್ತು ಸುರಪುರ ನಗರಸಭೆ ವ್ಯಾಪ್ತಿಯಲ್ಲಿ ಇನ್ನೂ 100 ಅರ್ಜಿಗಳನ್ನು ಸ್ವೀಕರಿಸುವಂತೆ ಹಾಗೂ ಅಂತಹ ಅರ್ಜಿಗಳಿಗೆ ಸಂಬಂಧಿಸಿದ ಬ್ಯಾಂಕ್‌ಗಳು ನಿಗದಿತ ಅವಧಿಯೊಳಗೆ ಸಾಲ ಮಂಜೂರು ಮಾಡುವಂತೆ ಹಾಗೂ ವಿಳಂಬಕ್ಕೆ ಆಸ್ಪದ ನೀಡದಂತೆ ಕ್ರಮವಹಿಸಲು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜನರ್‌ಗೆ ಜಿಲ್ಲಾಧಿಕಾರಿ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಸಭೆಯಲ್ಲಿದ್ದರು.