Advertisement
ಅವರು ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ ಅವರೊಂದಿಗೆ ಭಾಗವಹಿಸಿ ಮಾತನಾಡಿದರು.
Related Articles
Advertisement
ಕೃಷಿಯಿಂದ ಆರ್ಥಿಕ ಭದ್ರತೆ: ಕರ್ನಾಟಕ ಕೃಷಿ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಕಂಡಿದೆ. 10 ಕೃಷಿ ಹವಾಮಾನ ವಲಯಗಳು ರಾಜ್ಯದಲ್ಲಿದ್ದು, ವರ್ಷಪೂರ್ತಿ ಕೃಷಿ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಕೃಷಿ ವಲಯದ ಶೇ.1 ಅಭಿವೃದ್ಧಿ, ಉತ್ಪಾದನಾ ಕ್ಷೇತ್ರದಲ್ಲಿ ಶೇ. 4 ಹಾಗೂ ಸೇವಾ ವಲಯದಲ್ಲಿ ಶೇ. 10 ರಷ್ಟು ಅಭಿವೃದ್ಧಿಗೆ ಕಾರಣವಾಗುತ್ತದೆ. ಆಹಾರ ಕ್ಷೇತ್ರ ಆಹಾರ ಭದ್ರತೆಯ ಜೊತೆಗೆ ಆರ್ಥಿಕ ಭದ್ರತೆಯನ್ನೂ ಕೊಡುವುದರಿಂದ ಉದ್ಯಮಿಗಳು ಆಹಾರ ಕ್ಷೇತ್ರದತ್ತ ಗಮನಹರಿಸಬೇಕು. ಆಹಾರ ಮತ್ತು ಸೇವಾ ವಲಯದ ಸಂಪರ್ಕ ಗಟ್ಟಿಗೊಳ್ಳಬೇಕು. ಇದಕ್ಕೆ ಪೂರಕವಾದ ನೀತಿಗಳನ್ನೂ ರೂಪಿಸಲಾಗಿದೆ. ಪ್ರಧಾನಿಗಳ ಆಶಯವಾದ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಸಾಕಾರವಾದಾಗ, ರೈತರ ಆದಾಯವೂ ದುಪ್ಪಟ್ಟಾಗುತ್ತದೆ. ಆಗ ಶೇ. 60 ಪ್ರತಿಶತ ಕೃಷಿಯನ್ನೇ ನಂಬಿರುವ ಜನರ ಜೀವನ ಸುಧಾರಣೆ ಸಾಧ್ಯ. ತಳಮಟ್ಟದ ಶ್ರಮಿಕರೇ ಆರ್ಥಿಕತೆಯ ಬೆನ್ನೆಲುಬು ಆಗಿದ್ದಾರೆ. ಮುಂದಿನ 25 ವರ್ಷಗಳ ಅಮೃತ ಕಾಲದಲ್ಲಿ ಶ್ರಮಿಕ ವರ್ಗದ ಅಭಿವೃದ್ಧಿಯನ್ನು ಗುರಿಯಾಗಿಸಿಕೊಳ್ಳಬೇಕಿದೆ ಎಂದರು.
ಆತ್ಮವಿಶ್ವಾಸ ತುಂಬಿಸಿದ ಆತ್ಮನಿರ್ಭರ: ಒಂದು ದೇಶ 75 ವರ್ಷಗಳಲ್ಲಿ ಅಗಾಧ ಅನುಭವವನ್ನು ಹೊಂದಿರುತ್ತದೆ. ಅನೇಕ ಏಳುಬೀಳುಗಳನ್ನು ಕಂಡಿದೆ. ಪ್ರಜಾಪ್ರಭುತ್ವಕ್ಕೆ ಹಾಕಲಾಗಿದ್ದ ಸವಾಲುಗಳನ್ನು ದೇಶದ ಜನರ ನೈತಿಕ ಶಕ್ತಿಯಿಂದ ಎದುರಿಸಲಾಯಿತು. ಮೇಕ್ ಇನ್ ಇಂಡಿಯಾ ನೀತಿ ಭಾರತವನ್ನು ಸದೃಢವಾಗಿಸಿತು. ಆತ್ಮನಿರ್ಭರ ಮಂತ್ರದಿಂದ ದೇಶದ ಜನರ ಆತ್ಮವಿಶ್ವಾಸ ಹೆಚ್ಚಿತು. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬ ನಾಗರಿಕರಲ್ಲಿ ಆತ್ಮವಿಶ್ವಾಸವನ್ನು ತುಂಬಿದರು. ದೇಶದ ಕಟ್ಟಕಡೆಯ ವ್ಯಕ್ತಿಯ ಆಶಾಭಾವವೇ ಈ ದೇಶದ ಶಕ್ತಿ. ಕಟ್ಟಕಡೆಯ ವ್ಯಕ್ತಿ ದೇಶದ ಅಭಿವೃದ್ಧಿಯಲ್ಲಿ ಭಾಗಿಯಾಗುವ ಮೂಲಕ ದೇಶದ ಭವಿಷ್ಯವಾಗುತ್ತಾನೆ. ಈ ನೀತಿಯನ್ನೇ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬಿಂಬಿಸುತ್ತದೆ. ದೂರದೃಷ್ಟಿಯ, ಶಕ್ತಿಯುತ ನಾಯಕ ಬೇಕಾಗುತ್ತದೆ. ಈ ಗುಣಗಳನ್ನು ನಾವು ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಕಾಣಬಹುದಾಗಿದೆ ಎಂದು ತಿಳಿಸಿದರು.
ಸಮಾರಂಭದಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಕಿಶನ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವ ಮುರುಗೇಶ ನಿರಾಣಿ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಉಪಸ್ಥಿತರಿದ್ದರು.