Advertisement

ಮೀಸಲಾತಿ ವ್ಯವಸ್ಥೆ ಅನುಸರಿಸಲು ಬದ್ಧ: ರಾಜ್ಯ ಸರ್ಕಾರ 

06:50 AM Mar 20, 2018 | Team Udayavani |

ಬೆಂಗಳೂರು: ಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಸೇರಿದಂತೆ ರಾಜ್ಯದಲ್ಲಿರುವ ಸರ್ಕಾರಿ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಈ ಹಿಂದೆ ಇದ್ದ ಮೀಸಲಾತಿ ವ್ಯವಸ್ಥೆಯನ್ನೇ ಅನುಸರಿಸಲು ಬದ್ಧ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಹೇಳಿದೆ.

Advertisement

ವಸತಿ ಶಾಲೆಗಳ ದಾಖಲಾತಿಯಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೇ, ಶೇ.100 ಸೀಟುಗಳನ್ನು ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿಟ್ಟಿರುವ ಕ್ರಮ ಪ್ರಶ್ನಿಸಿ ವಿದ್ಯಾರ್ಥಿಗಳ ಪಾಲಕರಾದ ಬೆಳಗಾವಿಯ ವಿಶ್ವನಾಥ ಎಸ್‌. ಮಠದ್‌ ಹಾಗೂ ಇತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎ.ಎಸ್‌. ಬೋಪಣ್ಣ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ರಾಜ್ಯ ಸರ್ಕಾರ ಸೋಮವಾರ ಪ್ರಮಾಣ ಪತ್ರ ಸಲ್ಲಿಸಿತು.

ರಾಜ್ಯದ ವಸತಿ ಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಈ ಹಿಂದಿನಂತೆ ಶೇ.50 ಸೀಟುಗಳನ್ನು ಸಾಮಾನ್ಯ ವರ್ಗ, ಶೇ.25 ಸೀಟು ಎಸ್‌ಸಿ, ಎಸ್‌ಟಿ ಹಾಗೂ ಶೇ. 25 ಸೀಟುಗಳನ್ನು ಹಿಂದುಳಿದ ವರ್ಗಗಳಿಗೆ ಮೀಸಲು ಇಡಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ 2018ರ ಫೆ.28ರಂದು ಸುತ್ತೋಲೆ ಹೊರಡಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿ ಇತ್ಯರ್ಥಪಡಿಸಿತು. ಇದರಿಂದ ಕಳೆದ ಫೆ.18ರಂದು ವಸತಿ ಶಾಲೆಗಳ ಪ್ರವೇಶಾತಿಗಾಗಿ ನಡೆಸಲು ಉದ್ದೇಶಿಸಲಾಗಿದ್ದ ಪ್ರವೇಶ ಪರೀಕ್ಷೆಗಳಿಗೆ ನೀಡಿದ್ದ ತಡೆಯಾಜ್ಞೆಯೂ ತೆರವುಗೊಂಡಂತಾಗಿದ್ದು, ಹೊಸದಾಗಿ ದಿನಾಂಕ ಪ್ರಕಟಿಸಿ ಸರ್ಕಾರ ಪ್ರವೇಶ ಪರೀಕ್ಷೆಗಳನ್ನು ನಡೆಸಬಹುದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next