Advertisement

ಬೆಂಬಲ ಬೆಲೆಯಡಿ ಶೇಂಗಾ ಖರೀದಿಗೆ ಒಪ್ಪಿಗೆ

10:32 PM Jan 14, 2020 | Lakshmi GovindaRaj |

ಬೆಂಗಳೂರು: ರಾಜ್ಯ ಸರ್ಕಾರ 6.68 ಲಕ್ಷ ಕ್ವಿಂಟಾಲ್‌ ಶೇಂಗಾವನ್ನು 2018ರ ಮಾರ್ಗಸೂಚಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಬೆಂಬಲ ಬೆಲೆ ಯೋಜನೆಯಡಿ ಹೆಸರು ಕಾಳು ಖರೀದಿ ಅವಧಿಯನ್ನು ಜ.31ರವರೆಗೆ ವಿಸ್ತರಿಸಿದೆ.

Advertisement

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಸಂತಸ ಹಂಚಿಕೊಂಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಸುಗ್ಗಿಯ ಹಬ್ಬ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ರಾಜ್ಯದ ರೈತರಿಗೆ ಸಂತಸದ ಸುದ್ದಿ ನೀಡಿದೆ. ಬೆಂಬಲ ಬೆಲೆ ಯೋಜನೆಯಡಿ 6.68 ಲಕ್ಷ ಕ್ವಿಂಟಾಲ್‌ ಶೇಂಗಾ ಖರೀದಿಸಲು ಕರ್ನಾಟಕಕ್ಕೆ ಒಪ್ಪಿಗೆ ನೀಡಿದೆ. ಹಾಗೆಯೇ ಹೆಸರುಕಾಳು ಖರೀದಿ ಗಡುವನ್ನು ಜ.31ರವರೆಗೆ ವಿಸ್ತರಿಸಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next