Advertisement

ಮೈಸೂರಿನ ಚಿತ್ರನಗರಿಗೆ ಅಪ್ಪು ಹೆಸರಿಡಲು ಚಿಂತನೆ

11:57 AM Nov 11, 2021 | Team Udayavani |

ಮೈಸೂರು: ಮೈಸೂರಿನಲ್ಲಿ ನಿರ್ಮಾಣ ವಾಗುವ ಚಿತ್ರನಗರಿಗೆ ನಟ ಪುನೀತ್‌ ರಾಜ್‌ ಕುಮಾರ್‌ ಅವರ ಹೆಸರಿಡಲು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ. ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮೈಸೂರಿನಲ್ಲಿ ನುಡಿನಮನ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲು ಬುಧವಾರ ಇಲ್ಲಿ ನಡೆಸಿದ ಪೂರ್ವಭಾವಿ ಸಭೆಯ ನಂತರ ಸಚಿವರು ಈ ವಿಷಯ ತಿಳಿಸಿದರು.

Advertisement

ನುಡಿ ನಮನ ಕಾರ್ಯಕ್ರಮವನ್ನು ಆಯೋ ಜಿಸಲು ಉಪಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಗಳು ಚರ್ಚಿಸಿ ನೀಡುವ ಸಲಹೆಯಂತೆ ಕಾರ್ಯಕ್ರಮ ಆಯೋಜಿಸಲಾಗುವುದು. ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು.

ಇದನ್ನೂ ಓದಿ:- ಬಾಷ್‍: 2ನೇ ತ್ರೈಮಾಸಿಕದಲ್ಲಿ ಶೇ. 17.7ರಷ್ಟು ಬೆಳವಣಿಗೆ

ಮುಖ್ಯಮಂತ್ರಿಗಳನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು ಎಂದರು. ಪುನೀತ್‌ ಪುಸ್ತಕ: ಕಾರ್ಯಕ್ರಮದಲ್ಲಿ ಪುನೀತ್‌ ರಾಜ್‌ಕುಮಾರ್‌ ಕುರಿತು ಪುಸ್ತಕ ಬಿಡುಗಡೆ ಮಾಡಲಾಗುವುದು. ಈ ಪುಸ್ತಕಕ್ಕೆ ಸಾರ್ವಜನಿಕರಿಂದ ಲೇಖನ ಆಹ್ವಾನಿಸಲಾಗುವುದು. ಅಭಿಮಾನಿಗಳು ಲೇಖನ ಕಳುಹಿಸಬಹುದು ಎಂದರು. ಸಭೆಯಲ್ಲಿ ಶಾಸಕ ಎಲ್‌.ನಾಗೇಂದ್ರ, ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರಾದ ಎಚ್‌.ವಿ.ರಾಜೀವ್‌, ಅಪ್ಪಣ್ಣ, ಆರ್‌.ರಘು ಕೌಟಿಲ್ಯ, ಎ.ಹೇಮಂತಕುಮಾರ್‌ ಗೌಡ, ಎಲ್‌.ಆರ್‌.ಮಹದೇವಸ್ವಾಮಿ, ಫ‌ಣೀಶ್‌, ಕೃಷ್ಣಪ್ಪ ಗೌಡ, ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ, ರಾಜಶೇಖರ ಕದಂಬ, ಮಡ್ಡಿಕೆರೆ ಗೋಪಾಲ್‌, ಬನ್ನೂರು ರಾಜು ಮತ್ತಿತರರು ಉಪಸ್ಥಿತರಿದ್ದರು.

 ರಾಜೀನಾಮೆ ಬಗ್ಗೆ ಮಾತನಾಡುವಷ್ಟು ಪ್ರಿಯಾಂಕ ಬೆಳೆದಿಲ್ಲ-

Advertisement

 ಮೈಸೂರು: ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಆಗುವು ದಿಲ್ಲ. ಹಾಗಾಗಿ ಪ್ರಿಯಾಂಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ .ಟಿ.ಸೋಮಶೇಖರ್‌ ಹೇಳಿದರು. ಬಿಟ್‌ಕಾಯಿನ್‌ ಪ್ರಕರಣದ ಬಗೆಗಿನ ಪ್ರಿಯಾಂಕ ಖರ್ಗೆ ಹೇಳಿಕೆ ಸಂಬಂಧ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ಬಗ್ಗೆ ಮಾತನಾಡುವಷ್ಟು ದೊಡ್ಡ ಮಟ್ಟಕ್ಕೆ ಪ್ರಿಯಾಂಕ ಖರ್ಗೆ ಬೆಳೆದಿಲ್ಲ. ಅವರಪ್ಪ ಕೇಂದ್ರದಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಪ್ರಿಯಾಂಕ ಖರ್ಗೆ ಜೂನಿಯರ್‌ಗಳಲ್ಲಿ ಜೂನಿಯರ್‌ ಆಗಿದ್ದಾರೆ ಎಂದು ಕಿಡಿಕಾರಿದರು. ಬಿಟ್‌ ಕಾಯಿನ್‌ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ದೆಹಲಿಯಲ್ಲಿ ಉತ್ತರ ನೀಡಿ¨ªಾರೆ. ಪ್ರಕರಣ ಸಂಬಂಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ತನಿಖೆ ಬಳಿಕ ಪ್ರಕರಣದ ಸತ್ಯಾಂಶ ಹೊರ ಬರುತ್ತದೆ. ಇದಕ್ಕೂ ಮುನ್ನವೇ ಸಿಎಂ ಬದಲಾವಣೆ ಆಗುತ್ತದೆ ಎಂದು ಪ್ರಿಯಾಂಕ ಖರ್ಗೆಗೆ ಕನಸು ಕಂಡಿದ್ದರಾ ಎಂದು ಪ್ರಶ್ನಿಸಿದ ಅವರು, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿ ಅವರ ಅವಧಿಯನ್ನು ಪೂರ್ಣ ಮಾಡಲಿದ್ದಾರೆ ಎಂದರು. ವಿಧಾನಪರಿಷತ್‌ ಚುನಾವಣೆಗೆ ದಿನಾಂಕ ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಎರಡು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ. ಈಗಾಗಲೇ ಪಟ್ಟಿಯನ್ನು ಕೇಂದ್ರ ನಾಯಕರಿಗೆ ಕಳುಹಿಸಲಾಗಿದೆ. ನಮ್ಮ ಹೈಕಮಾಂಡ್‌ ಅಭ್ಯರ್ಥಿಗಳ ಆಯ್ಕೆ ಮಾಡುತ್ತಾರೆ. 25 ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಪಡೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 ಹಳೇ ಲವ್‌ ಸ್ಟೋರಿ ಬಗ್ಗೆ ಸಿದ್ದು, ಜಿಟಿಡಿ ಮಾತು

ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹಾಗೂ ಜಿ.ಟಿ.ದೇವೇಗೌಡ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸೋಮಶೇಖರ್‌, ಹಳೇ ಸ್ನೇಹಿತರು ಒಂದು ಕಡೆ ಸೇರಿದ್ದಾರೆ. ಈ ವೇಳೆ ಹಳೆಯ ಲವ್‌ ಸ್ಟೋರಿ ಬಗ್ಗೆ ಮಾತನಾಡಿಕೊಂಡಿದ್ದಾರೆ. ಇಬ್ಬರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಮಾತ್ರಕ್ಕೆ ಪಕ್ಷ ಸೇರುತ್ತಾರೆ ಎಂಬ ಅರ್ಥ ಅಲ್ಲ. ಇಬ್ಬರು ಪರಸ್ಪರ ಎದುರಾಳಿಗಳು. ನಾವು ಕೂಡ ಹಲವು ಕಾರ್ಯಕ್ರಮಗಳಲ್ಲಿ ವೇದಿಕೆ ಹಂಚಿಕೊಂಡಿದ್ದೇವೆ. ಹಾಗಂತ ನಮ್ಮ ಜತೆ ವೇದಿಕೆ ಹಂಚಿಕೊಂಡವರು ಬಿಜೆಪಿಗೆ ಸೇರುತ್ತಾರೆ ಎಂಬ ಅರ್ಥ ಅಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next