Advertisement

ಅಪ್ಪು ಅಂತಿಮ ನಮನ : ಕಂಠೀರವ ಸ್ಟೇಡಿಯಂ ಬಳಿ ನೂಕು ನುಗ್ಗಲು

08:22 PM Oct 29, 2021 | Team Udayavani |

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಸಾ ರ್ವಜನಿಕ ಅಂತಿಮ ದರ್ಶನಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಇಡಲಾಗಿದೆ.

Advertisement

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಿ ಖ್ಯಾತ ನಟನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.
ಕ್ರೀಡಾಂಗಣದ ಹೊರಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾವಣೆ ಗೊಂಡಿದ್ದಾರೆ. ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ನೂರಾರು ಜನರು ಸ್ಟೇಡಿಯಂ ಒಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸಾವಿರಾರು ಜನರು ಆಗಮಿಸಿರುವ ಹಿನ್ನಲೆಯಲ್ಲಿ ನೂಕು ನುಗ್ಗಲು ಉಂಟಾಗಿದೆ. ಅಭಿಮಾನಿಗಳು ‘‘ಅಪ್ಪು ಅಮರ’‘ ಎಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಕಂಠೀರವ ಸ್ಟೇಡಿಯಂ ಬಳಿ ಆಕ್ರಂದನ ಮುಗಿಲು ಮುಟ್ಟಿದೆ.

ಪೇದೆಯೊಬ್ಬರ ಕಾಲು ಮುರಿತ

Advertisement

ಅಭಿಮಾನಿಗಳನ್ನು ತಡೆಯುವ ವೇಳೆ ಪೊಲೀಸ್ ಪೇದೆಯೊಬ್ಬರ ಕಾಲು ಮುರಿತಕ್ಕೊಳಗಾಗಿದೆ.

ಸದಾಶಿವ ನಗರದಲ್ಲಿ ಅಘೋಷಿತ ಬಂದ್ ವಾತಾವರಣ ಕಂಡು ಬಂದಿದೆ. ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಹಾಕಲಾಗಿದೆ.

ಇಂದು ರಾತ್ರಿ ಮತ್ತು ನಾಳೆಯವರೆಗೆ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.

ಭಾನುವಾರ  ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಸರಕಾರ ಅಧಿಸೂಚನೆ ಹೊರಡಿಸಿದೆ.

ತಂದೆ ವರನಟ ಡಾ. ರಾಜ್ ಕುಮಾರ್  ಸಮಾಧಿ ಪಕ್ಕದಲ್ಲೇ ಪುನೀತ್ ಆವರ ಅಂತ್ಯಕ್ರಿಯೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next