Advertisement
ಜನರ ಬಳಿಗೆ ಸರ್ಕಾರವೇ ಬಂದು ಸಮಸ್ಯೆ ಆಲಿಸಬೇಕು ಎನ್ನುವುದು “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು, ಕಂದಾಯ ಸಚಿವ ಆರ್ ಅಶೋಕ್ ಅವರೇ ಇದರ ನೇತೃತ್ವವಹಿಸಿ ಈ ಕಾರ್ಯಕ್ರಮವನ್ನು ಮುನ್ನೆಡೆಸುತ್ತಿದ್ದಾರೆ. ಇದು ಆರ್ ಅಶೋಕ್ ಅವರ ಕನಸಿನ ಯೋಜನೆಗಳಲ್ಲಿ ಒಂದಾಗಿದ್ದು, ಈ ಬಾರಿ ಉತ್ತರ ಕನ್ನಡ ಜಿಲ್ಲೆಯ, ಹೊಲನಗದ್ದೆ, ಆಚವೆ, ಹಿಲ್ಲೂರು ಗ್ರಾಮದಲ್ಲಿ ಸಚಿವರು ಸ್ವತಃ ಭಾಗವಹಿಸಲಿದ್ದಾರೆ. ಮೆಟ್ರಿಕ್ ಪೂರ್ವ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಸಚಿವ ಆರ್ ಅಶೋಕ್ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.
Related Articles
Advertisement
16 ನೇ ತಾರೀಖಿನಂದು ಬೆಳಿಗ್ಗೆ ವಸತಿ ನಿಲಯದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.
10ಗಂಟೆಗೆ ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮದ ಗೌಳಿ ಕಾಲೋನಿಗೆ ಭೇಟಿ ನೀಡಿ, ಕುಂದುಕೊರತೆಗಳ ಕುರಿತು ಜನರೊಂದಿಗೆ ಸಂವಾದ ನಡೆಸಲಿದ್ದಾರೆ.
ರಾಜ್ಯಾದ್ಯಂತ ಎಲ್ಲ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಶಿಲ್ದಾರರು ಸಹ ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗಳನ್ನು ಪರಿಹಾರ ಮಾಡಲಿದ್ದಾರೆ. 24 ಗಂಟೆಗಳ ಕಾಲ ಹಳ್ಳಿಯಲ್ಲಿಯೇ ಇದ್ದು ಎಲ್ಲ ಅರ್ಜಿಗಳನ್ನು ಕಡ್ಡಾಯವಾಗಿ ಅಲ್ಲಿಯೇ ವಿಲೇವಾರಿ ಮಾಡುವುದು ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ವಿಶೇಷತೆ.
ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ದಿನಕರ ಶೆಟ್ಟಿ, ಸುನೀಲ್ ನಾಯ್ಕ್, ರೂಪಾಲಿ ನಾಯ್ಕ್ ಹಾಗೂ ಜಿಲ್ಲಾಧಿಕಾರಿಗಳು ಭಾಗವಹಿಸಲಿದ್ದಾರೆ.