Advertisement

April 17: ಮಂಡ್ಯ, ಕೋಲಾರದಲ್ಲಿ ರಾಹುಲ್‌ ಗಾಂಧಿ ಪ್ರಚಾರ

12:59 AM Apr 12, 2024 | Team Udayavani |

ಬೆಂಗಳೂರು: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಎ. 17ರಂದು ರಾಜ್ಯಕ್ಕೆ ಆಗಮಿಸಿ ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್‌ ಪರ ಪ್ರಚಾರ ನಡೆಸಲು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯಕ್ಕೆ ಬರುವುದಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Advertisement

ಎ. 17ರಂದು ಮಂಡ್ಯದಲ್ಲಿ ಬೆಳಗ್ಗೆ ಹಾಗೂ ಅಪರಾಹ್ನ 3 ಗಂಟೆಗೆ ರಾಹುಲ್‌ ಗಾಂಧಿ ಕೋಲಾರದಲ್ಲಿ ಚುನಾವಣ ಪ್ರಚಾರ ಸಭೆ ನಡೆಸಲಿದ್ದಾರೆ. ಒಂದು ವೇಳೆ ಅಂದು ಸಮಯವಿದ್ದರೆ ಸಂಜೆ ಬೆಂಗಳೂರಿನ ಐದಾರು ವಿಧಾನಸಭಾ ಕ್ಷೇತ್ರಗಳಲ್ಲಿ ಅವರು ರೋಡ್‌ಶೋ ನಡೆಸುವ ಸಾಧ್ಯತೆಗಳಿವೆ.

ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಆರೋಗ್ಯದ ಕಾರಣ ದಿಂದಾಗಿ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಪ್ರಚಾರಕ್ಕೆ ಆಗ ಮಿ ಸುವುದಿಲ್ಲ. ಬದಲಿಗೆ ಪುತ್ರಿ ಪ್ರಿಯಾಂಕಾ ಗಾಂಧಿ ವಾಧ್ರಾ ಒಂದು ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಾಧ್ಯತೆಗಳಿದ್ದು, ಕ್ಷೇತ್ರ ಯಾವುದು ಎಂಬುದು ಶುಕ್ರವಾರ ಇಲ್ಲವೇ ಶನಿವಾರ ನಿಗದಿಯಾಗುವ ಸಾಧ್ಯತೆ ಗಳಿವೆ ಎಂದು ಕೆಪಿಸಿಸಿಯ ಉನ್ನತ ಮೂಲಗಳು ತಿಳಿಸಿವೆ.ಉಳಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ಪಕ್ಷದ ಪರ ವಾಗಿ ಪ್ರಚಾರ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next