Advertisement

ಏ.1ರಂದು ಚಿಕ್ಕಬಳ್ಳಾಪುರಕ್ಕೆ; ಅಮಿತ್‌ಶಾ ಸಮಾರಂಭಕ್ಕೆ ಸಾವಿರ ಜನ ಭಾಗಿ

04:12 PM Mar 31, 2022 | Team Udayavani |

ದೇವನಹಳ್ಳಿ: ಏ.1ರಂದು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಲಿದ್ದು ದೇವನಹಳ್ಳಿ ತಾಲೂಕಿನಿಂದ 1 ಸಾವಿರದಿಂದ ಒಂದೂವರೆ ಸಾವಿರದವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

Advertisement

ಪಟ್ಟಣದ ಸೂಲಿಬೆಲೆ ರಸ್ತೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ.ಅಶ್ವಥನಾರಾಯಣ್‌(ಎಸ್‌ಎಲ್‌ ಎನ್‌) ಅವರ ನಿವಾಸದಲ್ಲಿ ತಾಲೂಕು ಬಿಜೆಪಿಯಿಂದ ಹಮ್ಮಿ ಕೊಂಡಿದ್ದ ಏ.1ರಂದು ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಆಗಮಿಸಲಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ತುಮಕೂರಿನ ಸಿದ್ಧಗಂಗಾ ಶ್ರೀಗಳ 115ನೇ ಜನ್ಮ ಜಯಂತಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನ ಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಸಮಾಗಮ ಕ್ರೀಡಾಂಗಣಕ್ಕೆ ಮಧ್ಯಾಹ್ನ2.15ಕ್ಕೆ ಆಗಮಿಸಲಿದ್ದಾರೆ. ಬಳಿಕ ಸತ್ಯಸಾಯಿ ಗ್ರಾಮದಲ್ಲಿ ಈಗಾಗಲೇ ನಿರ್ಮಾಣವಾಗಿರುವ ಸರಳ ಸ್ಮಾರಕ ಆಸ್ಪತ್ರೆಯಲ್ಲಿ ಹೆಚ್ಚುವರಿಯಾಗಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಕೇಂದ್ರ ಸಚಿವ ಅಮಿತ್‌ ಶಾ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.

ನಂತರ ಚಿಕ್ಕಬಳ್ಳಾಪುರ ನಗರದ ಸಿದ್ದೇಶ್ವರ ಸಮುದಾಯ ಭವನದಲ್ಲಿ ಇದೇ ಮೊದಲ ಬಾರಿಗೆ ಆಗಮಿಸುತ್ತಿರುವಹಿನ್ನೆಲೆಯಲ್ಲಿಅವರನ್ನು ಸ್ವಾಗತಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಬೇಕಾಗಿ ಕೋರಲಾಗಿದೆ ಎಂದು ಹೇಳಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಷ್ಟ್ರ ನಾಯಕರಾಗಿದ್ದು ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ವಲ್ಲಭಬಾಯಿ ಪಟೇಲ್‌ ನಂತರ ಅಮಿತ್‌ ಶಾ ತನ್ನದೇ ಆದ ವ್ಯಕ್ತಿತ್ವವನ್ನು ಮತ್ತು ದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ಕೊಟ್ಟಿದ್ದಾರೆ. ಮೊದಲ ಬಾರಿಗೆ ಸಹಕಾರ ಸಚಿವರಾಗಿದ್ದಾರೆ. ಕೇಂದ್ರ ಗೃಹ ಸಚಿವರು ನಮ್ಮ ಕ್ಷೇತ್ರಕ್ಕೆ ಬರುತ್ತಿರುವುದು ಸಂತಸ ತಂದಿದೆ. ಕೇಂದ್ರ ಅಮಿತ್‌ ಶಾ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು 370 ತಿದ್ದುಪಡಿ ಮೂಲಕ ರದ್ದುಮಾಡಿ ದೇಶಾದ್ಯಂತ ಸಮಾನವಾದ ಕಾನೂನನ್ನು ಜಾರಿಗೊಳಿಸುವುದರ ಮೂಲಕ ದಿಟ್ಟ ನಿರ್ಧಾರಕ್ಕೆ ನಾಂದಿ ಹಾಡಿದ್ದಾರೆ ಎಂದು ತಿಳಿಸಿದರು.

Advertisement

ಅಮಿತ್‌ ಶಾ ಅವರು ನಮ್ಮ ಕ್ಷೇತ್ರಕ್ಕೆ ಬರುತ್ತಿರುವುದರಿಂದ ಪಕ್ಕದ ಕ್ಷೇತ್ರವಾದ ದೇವನಹಳ್ಳಿಗೆ ಮತ್ತಷ್ಟು ಶಕ್ತಿ ಬರಲು ಸಾಧ್ಯವಾಗುತ್ತದೆ. ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಮುಖಂಡರು ಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕ್ಷೇತ್ರದಿಂದ ಬರಬೇಕು ಎಂದು ಹೇಳಿದರು.

ಮಾಜಿ ಶಾಸಕರಾದ ಜಿ.ಚಂದ್ರಣ್ಣ, ಪಿಳ್ಳಮುನಿಶಾಮಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ,ಅಂತಾರಾಷ್ಟ್ರೀಯವಿಮಾನ ನಿಲ್ದಾಣ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ.ಅಶ್ವಥನಾರಾಯಣ್‌(ಎಸ್‌.ಎಲ್‌.ಎನ್‌.), ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಎಚ್‌.ಎಂ.ರವಿಕುಮಾರ್‌, ತಾಲೂ ಕು ಬಿಜೆಪಿ ಅಧ್ಯಕ್ಷ ಸುನಿಲ್‌, ಉಪಾಧ್ಯಕ್ಷರಾದ ನಾಗೇಶ್‌, ಪುನೀತ, ಪ್ರಧಾನ ಕಾರ್ಯದರ್ಶಿ ನೀಲೇರಿ ಮಂಜುನಾಥ್‌, ದೇವನಹಳ್ಳಿ ಟೌನ್‌ ಬಿಜೆಪಿ ಅಧ್ಯಕ್ಷ ಸಂದೀಪ್‌, ವಿಜಯಪುರ ಟೌನ್‌ ಅಧ್ಯಕ್ಷ ಮಂಜುನಾಥ್‌, ಜಿಲ್ಲಾ ಮಾದ್ಯಮ ಪ್ರಮುಖ್‌ ಎಸ್‌. ರಮೇಶ್‌ ಕುಮಾರ್‌, ತಾಲೂಕು ಮಹಿಳಾಮೋರ್ಚಾ ಅಧ್ಯಕ್ಷೆ ವಿಮಲಾ, ಕಾರ್ಯದರ್ಶಿ ದಾಕ್ಷಾಯಿಣಿ, ತಾಪಂ ಮಾಜಿ ಉಪಾಧ್ಯಕ್ಷ ಎಸ್‌.ಎಂ ನಾರಾಯಣಸ್ವಾಮಿ ಮುಖಂಡರಾದ ದೇಸು ನಾಗರಾಜ್‌, ವೈಕೆ ಚಂದ್ರಶೇಖರ್‌, ಶಿವನಾಪುರ ಎಸ್‌. ಆರ್‌.ವಿಜಯಕುಮಾರ್‌, ವಿಜಯಪುರ ಗಿರೀಶ್‌, ಅನಿಲ್‌ ಯಾದವ್‌, ಉಮೇಶ್‌ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next