Advertisement

ಎ.23: ಚಿತ್ರದುರ್ಗ, ಬೆಂಗಳೂರು ದಕ್ಷಿಣದಲ್ಲಿ ಪ್ರಿಯಾಂಕಾ ರೋಡ್‌ ಶೋ

11:18 PM Apr 20, 2024 | Team Udayavani |

ಬೆಂಗಳೂರು: ಮತದಾನಕ್ಕೆ ಕೇವಲ ಮೂರು ದಿನ ಬಾಕಿ ಇರು ವಾಗ ರಾಜ್ಯಕ್ಕೆ ಕಾಂಗ್ರೆಸ್‌ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ.

Advertisement

ಎ. 23ಕ್ಕೆ ರಾಜ್ಯಕ್ಕೆ ಆಗಮಿಸಲಿರುವ ಪ್ರಿಯಾಂಕಾ ಅಂದು ಚಿತ್ರದುರ್ಗ ಮತ್ತು ಬೆಂಗಳೂರು ದಕ್ಷಿಣದಲ್ಲಿ ಪ್ರಚಾರ ನಡೆಸಲಿದ್ದಾರೆ. ಈ ವೇಳೆ ಹಮ್ಮಿಕೊಂಡ ರೋಡ್‌ ಶೋ ಮತ್ತು ಸಮಾವೇಶಗಳಲ್ಲಿ ಭಾಗ ವಹಿಸಲಿದ್ದಾರೆ.

ಈಗಾಗಲೇ ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮಂಡ್ಯ ಮತ್ತು ಕೋಲಾರ ಚುನಾವಣ ಪ್ರಚಾರದಲ್ಲಿ ಭಾಗವಹಿಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಪ್ರಚಾರಕ್ಕೆ ಆಗಮಿಸುವ ನಿರೀಕ್ಷೆ ಇದೆ. ಆದರೆ ಸೋನಿಯಾ ಗಾಂಧಿ ಆಗಮಿಸುತ್ತಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next