Advertisement

ಎ. 11: ಉಡುಪಿ ಜಿಲ್ಲೆಗೆ ಸಿಎಂ ಬೊಮ್ಮಾಯಿ ಭೇಟಿ

03:10 AM Apr 07, 2022 | Team Udayavani |

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎ. 11ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Advertisement

ಅಂದು ಬೆಳಗ್ಗೆ ಅವರು ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿ, ಮಂಗಳೂರಿನಿಂದ ಆದಿಉಡುಪಿಗೆ ಹೆಲಿಕಾಪ್ಟರ್‌ ಮೂಲಕ ಬಂದಿಳಿಯಲಿದ್ದಾರೆ. ಮಧ್ಯಾಹ್ನ 12ಕ್ಕೆ ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಪರಾಹ್ನ 3ಕ್ಕೆ ಡಾ| ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್‌ ಗ್ರಂಥಾಲಯ ಉದ್ಘಾಟನೆ, 3.30ಕ್ಕೆ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ಉದ್ಘಾಟನೆ ನೆರವೇರಿಸಲಿದ್ದಾರೆ.

ಸಂಜೆ 5.30ಕ್ಕೆ ಸಗ್ರಿ ಶ್ರೀ ವಾಸುಕಿ ಸುಬ್ರಹ್ಮಣ್ಯ ದೇವಸ್ಥಾನದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಮಣಿಪಾಲದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಇದನ್ನೂ ಓದಿ:ಮಾಜಿ ಪತ್ನಿಯ ರೆಸ್ಟೋರೆಂಟ್‌ನಲ್ಲಿ ಗರ್ಲ್ ಫ್ರೆಂಡ್‌ ಜೊತೆ ಹೃತಿಕ್‌ ಪಾರ್ಟಿ

Advertisement

ಸಿದ್ಧತೆಗೆ ಜಿಲ್ಲಾಧಿಕಾರಿ ಸಭೆ
ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಪೂರ್ವ ತಯಾರಿಯ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು. ಶಾಸಕ ರಘುಪತಿ ಭಟ್‌, ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಜಿಲ್ಲಾ ಪೋಲಿಸ್‌ ವರಿಷ್ಠಾಧಿಕಾರಿ ಎನ್‌. ವಿಷ್ಣುವರ್ಧನ್‌, ಅಪರ ಜಿಲ್ಲಾಧಿಕಾರಿ ವೀಣಾ, ನಗರಸಭೆಯ ಪೌರಾಯುಕ್ತ ಉದಯ ಶೆಟ್ಟಿ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next