Advertisement

Apsara Rani: ಮುದುಡಿ‌ದ ಎಲೆಗಳಿ‌ಗೆ ಅಪ್ಸರಾ ಸ್ಪರ್ಶ 

06:57 PM Jul 10, 2024 | Team Udayavani |

ರಾಮ್‌ ಗೋಪಾಲ್‌ ವರ್ಮ ಅವರ “ಡೇಂಜರಸ್‌’ ಚಿತ್ರದ ಮೂಲಕ ಗುರುತಿಸಿಕೊಂಡಿರುವ ಗ್ಲಾಮರಸ್‌ ಗೊಂಬೆ ಅಪ್ಸರಾ ರಾಣಿ ಇದೇ ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ.

Advertisement

ಎಂ.ಶಂಕರ್‌ ನಿರ್ದೇಶನ, ನಿರ್ಮಾಣದ ಮುದುಡಿದ ಎಲೆಗಳು ಚಿತ್ರದ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಅಪ್ಸರಾ ರಾಣಿ ಅವರು ಅಭಿನಯಿಸಿದ ಹಾಡಿನ ಚಿತ್ರೀಕರಣ ಇತ್ತೀಚಿಗೆ ಹೆಬ್ಟಾಳದ ಪಶು ವೈದ್ಯಕೀಯ ಕಾಲೇಜಿನಲ್ಲಿ ನಡೆಯಿತು.

‘ಮುದುಡಿದ ಎಲೆಗಳು’ ಚಿತ್ರಕ್ಕೆ ಈಗಾಗಲೇ ಎಂಭತ್ತರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ಭಾಗಗಳ ಚಿತ್ರೀಕರಣ ಮಾತ್ರ ಬಾಕಿಯದೆ. ಒಂದು ಹಾಡಿನ ಚಿತ್ರೀಕರಣ ಕಾಶ್ಮೀರದಲ್ಲಿ ನಡೆದಿದೆ. ಮತ್ತೂಂದು ಹಾಡು ತಜಿಕಿಸ್ತಾನದಲ್ಲಿ ಚಿತ್ರೀಕರಣಗೊಳ್ಳಲಿದೆ.

ರಂಜಿತ್‌ ಕುಮಾರ್‌ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಪಂಕಜ್‌ ನಾರಾಯಣ್‌, ಪಾವನ ಗೌಡ, ನಿಕಿತಾ ಸ್ವಾಮಿ, ಸೂರ್ಯ ದರ್ಶನ್‌, ಪ್ರೀತಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next