Advertisement

ಸಂಕ್ರಾಂತಿ ಬಳಿಕ ಅಡಿಕೆ ಮಾರುಕಟ್ಟೆ ಚೇತರಿಕೆ‌: ರೈತರಿಗೆ ಕ್ಯಾಂಪ್ಕೊ ಮಾಹಿತಿ

11:39 PM Dec 15, 2022 | Team Udayavani |

ಮಂಗಳೂರು : ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿನ ಚುನಾವಣೆ ಮತ್ತು ವಿಪರೀತ ಚಳಿಯ ವಾತಾವರಣದಿಂದಾಗಿ ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣಲು ಸಾಧ್ಯವಾಗಿಲ್ಲ. ಆದರೆ ಕಳೆದೆರಡು ದಿನಗಳಿಂದ ಕೆಂಪಡಿಕೆ ದರ ಚೇತರಿಕೆ ಕಾಣು ತ್ತಿದ್ದು ಸಂಕ್ರಾಂತಿ ಬಳಿಕ ಚಾಲಿ ಅಡಿಕೆಗೂ ಪೂರ್ತಿಯಾಗಿ ಬೇಡಿಕೆ ಹೆಚ್ಚಾಗಲಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್‌ ಕುಮಾರ್‌ ಕೊಡ್ಗಿ ತಿಳಿಸಿದ್ದಾರೆ.

Advertisement

ಚಳಿಗಾಲದಲ್ಲಿ ದಾಸ್ತಾನಿನ ಸಮಸ್ಯೆ ಎದುರಾಗುವುದರಿಂದ ಸಾಮಾನ್ಯ ವಾಗಿ ಪಾನ್‌ ಮಸಾಲ ಕಂಪೆನಿಗಳು ಪೂರ್ಣ ಸಾಮರ್ಥ್ಯದಲ್ಲಿ ಉತ್ಪಾದಿಸು ವುದಿಲ್ಲ, ಹಾಗಾಗಿ ಈ ಸಮಯದಲ್ಲಿ ಅಡಿಕೆಗೆ ಬೇಡಿಕೆ ಕುಸಿತ ಸಾಮಾನ್ಯ.ಇದರ ಪರಿಣಾಮ ಕರಾವಳಿ ಭಾಗದ ಚಾಲಿ ಅಡಿಕೆಯ ಮಾರುಕಟ್ಟೆಯನ್ನೂ ಬಾಧಿಸುತ್ತದೆ.

ಕಳೆದ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ ಮತ್ತು ಉತ್ತರ ಭಾರತದ ವರ್ತಕರಿಂದ ಉತ್ತಮ ಬೇಡಿಕೆ ಬರುತ್ತಿದೆ. ಕಳೆದ ಎರಡು ತಿಂಗಳಿಗೂ ಮೇಲ್ಪಟ್ಟು ಚಾಲಿ ಅಡಿಕೆ ಉತ್ತರ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ರವಾನೆಯಾಗಿರುವುದಿಲ್ಲ.ಇದರಿಂದ ಅಲ್ಲಿ ಚಾಲಿ ಅಡಿಕೆ ದಾಸ್ತಾನು ಅಗತ್ಯಕ್ಕಿಂತ ತುಂಬಾ ಕಡಿಮೆಯಾಗಿದೆ. ರೈತರು ಗಾಳಿ ಸುದ್ದಿ ಮತ್ತು ಖಾಸಗಿ ವರ್ತಕರ ಬೆದರಿಕೆಗಳಿಗೆ ಕಿವಿಗೊಡುವ ಆವಶ್ಯಕತೆ ಇಲ್ಲ. ಹಣದ ಅವಶ್ಯಕತೆ ಇರುವಷ್ಟೇ ಅಡಿಕೆ ಮಾರಾಟ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಆಗಬಹುದಾದ ಚೇತರಿಕೆಯ ಲಾಭದ ಸದುಪಯೋಗ ಪಡೆಯಬಹುದು ಎಂದು ತಿಳಿಸಿದ್ದಾರೆ.

ಆಮದು ಬೆಲೆ ಹೆಚ್ಚಳಕ್ಕೆ ಶಿಫಾರಸು
ಸಹಕಾರ ಸಂಘಗಳ ನಿರಂತರ ಅನುಸರಣ ಕ್ರಮಗಳಿಂದಾಗಿ ಕನಿಷ್ಠ ಅಮದು ಬೆಲೆಯನ್ನು ಹೆಚ್ಚಿಸಿ ಆದೇಶ ಹೊರಡಿಸುವಂತೆ ವಾಣಿಜ್ಯ ಸಚಿವಾಲಯದಿಂದ ಕೃಷಿ ಸಚಿವಾಲಯಕ್ಕೆ ಶಿಫಾರಸನ್ನು ಕಳುಹಿಸಲಾಗಿದೆ. ಶೀಘ್ರ ಆದೇಶ ನೀಡುವು ದಾಗಿ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಅವರು ಆಶ್ವಾಸನೆ ನೀಡಿದ್ದಾರೆ ಎಂದು ಕೊಡ್ಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next