Advertisement
ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ 1964ರಲ್ಲಿಯೇ ಈ ರೋಗ ಕಂಡು ಬಂದಿದ್ದು, ಅಡಿಕೆೆಗೆ ಕಡಿಮೆ ಹಾನಿಯುಂಟು ಮಾಡಿತ್ತು. ಮಲೆನಾಡಿನ ಸಸಿ ತೋಟಗಳಲ್ಲಿ ಸಾಮಾನ್ಯವಾಗಿ ಕಂಡು ಬರುತ್ತಿದ್ದ ಈ ರೋಗವು ಎರಡು ವರ್ಷಗಳಿಂದೀಚೆಗೆ ಫಸಲು ಕೊಡುತ್ತಿರುವ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಅಡಿಕೆ ಗಿಡಗಳ ಎಲೆಗಳಲ್ಲಿ ದ್ಯುತಿ ಸಂಶ್ಲೇಷಣ ಪ್ರಕ್ರಿಯೆಗೆ ಹಾನಿ ಉಂಟು ಮಾಡಿ ಇಳುವರಿ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.
ಕಡಿಮೆ ಉಷ್ಣಾಂಶ ಹಾಗೂ ಹೆಚ್ಚಿನ ಆದ್ರìತೆಯಿಂದ ಕೂಡಿದ ವಾತಾವರಣ ಈ ರೋಗ ವೇಗವಾಗಿ ಹರಡಲು ಕಾರಣವಾಗಿದೆ. ಎಲೆ ಚುಕ್ಕಿ ರೋಗವು ಯಡಮೊಗೆ, ಹಳ್ಳಿಹೊಳೆ, ಕಮಲಶಿಲೆ, ಆಜ್ರಿ ಹಾಗೂ ಇನ್ನಿತರ ಗ್ರಾಮಗಳಲ್ಲಿ ಕಾಣಿಸಿಕೊಂಡಿದ್ದು, ಸೆಪ್ಟಂಬರ್‌ನಲ್ಲಿ ರೋಗ ಬಾಧೆಯು ತೀವ್ರವಾಗಿತ್ತು. ಇದನ್ನು ಗಮನಿಸಿದ ಯಡಮೊಗೆಯ ಜಯರಾಮ್ ನಾಯ್ಕ, ಈ ರೋಗವನ್ನು ನಿವಾರಣೆ ಮಾಡುವ ಸಲುವಾಗಿ ಬ್ರಹ್ಮಾವರ ಕೃಷಿ ವಿಜ್ಞಾನಿಗಳಿಂದ ಮಾಹಿತಿ ಪಡೆದು ಔಷಧ ಸಿಂಪಡಣೆ ಮಾಡಿದ್ದರಿಂದ ರೋಗವು ನಿಯಂತ್ರಣಕ್ಕೆ ಬಂದಿದೆ. ಈ ರೋಗದ ನಿಯಂತ್ರಣವನ್ನು ರೈತರು ಸಾಮೂಹಿಕವಾಗಿ ಕೈಗೆತ್ತಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ಭಾಗದ ಕೃಷಿಕರು ಈಗಾಗಲೇ ಪ್ರಯತ್ನಕ್ಕೆ ಕೈಹಾಕಿದ್ದು ರೋಗದ ನಿಯಂತ್ರಣಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂದು ಕುಂದಾಪುರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ನಿಧೀಶ್ ಕೆ.ಜಿ. ಅವರು ತಿಳಿಸಿದ್ದಾರೆ.
Related Articles
– ಅಡಿಕೆ ಸೋಗೆಯಲ್ಲಿ ಹಳದಿ ಬಣ್ಣದ ಅಂಚುಗಳಿರುವ ಬೂದು ಬಣ್ಣದ ಚುಕ್ಕೆಗಳು ಕಂಡು ಬರುತ್ತದೆ.
– ಸೋಗೆಗಳಲ್ಲಿ ಚುಕ್ಕೆಗಳು ಹೆಚ್ಚಾದಂತೆ ಒಂದಕ್ಕೊಂದು ಕೂಡಿಕೊಂಡು ಒಣಗಿದ ಸೋಗೆಗಳು ಸುಟ್ಟಂತೆ ಕಾಣುತ್ತದೆ.
– ಈ ಚುಕ್ಕೆ ರೋಗವು ತೋಟದಿಂದ ತೋಟಕ್ಕೆ ಹರಡಬಹುದು.
– ರೋಗ ಬಂದಿರುವ ಗಿಡಗಳಲ್ಲಿ ಫಸಲು ಕಡಿಮೆಯಾಗಿ ಇಳುವರಿ ಕುಂಠಿತವಾಗುತ್ತದೆ.
Advertisement
ನಿಯಂತ್ರಣಕ್ಕೇನು ಕ್ರಮ ?– ಮಳೆಗಾಲದ ಆರಂಭಕ್ಕೂ ಮುನ್ನ ಶೇ. 1ರ ಬೋಡೋì ದ್ರಾವಣವನ್ನು ಅಡಿಕೆ ಗೊನೆಗಳ ಜತೆಗೆ ಎಲೆಗಳು ಹಾಗೂ ಶಿರ ಭಾಗಗಳು ಸಂಪೂರ್ಣವಾಗಿ ನೆನೆಯುವ ಹಾಗೆ ಸಿಂಪಡಿಸಬೇಕು. ಕನಿಷ್ಠ 3 ಬಾರಿ ಹಂತ ಹಂತವಾಗಿ ಸಿಂಪಡಿಸಬೇಕು.
– ಯಾವುದೇ ಶಿಲೀಂಧ್ರ (propico nozol) ನಾಶಕ ಸಿಂಪಡಿಸುವ ಸಂದರ್ಭ ತೋಟದ ಶುಚಿತ್ವ ಹಾಗೂ ಮಳೆ ಬಾರದಿರುವ ಸಮಯ ನಿಗದಿಪಡಿಸಬೇಕು.
– ಮಣ್ಣು ಪರೀಕ್ಷೆ ಆಧಾರದ ಮೇಲೆ ಸಮರ್ಪಕವಾಗಿ ಪೋಷಕಾಂಶಗಳನ್ನು ನೀಡಬೇಕು.