Advertisement

Shivamogga: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರ ರಾಜೀನಾಮೆಗೆ ಆರಗ ಆಗ್ರಹ

05:33 PM May 28, 2024 | Team Udayavani |

ಶಿವಮೊಗ್ಗ: ರಾಜ್ಯ ವಾಲ್ಮೀಕಿ ನಿಗಮದ ಅಧೀಕ್ಷಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅವರು ಬರೆದಿಟ್ಟಿರುವ ಡೆತ್ ನೋಟ್ ಆಶ್ಚರ್ಯಕರ ಅನೇಕ ಸತ್ಯ ಸಂಗತಿಗಳನ್ನು ಹೊರಹಾಕಿದೆ. ಎಸ್ ಟಿ ಸಮುದಾಯದ ಹಣ ಅನಧಿಕೃತವಾಗಿ ವರ್ಗಾವಣೆ ಆಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಮಾಜಿ ‌ಗೃಹ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

Advertisement

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೀರ್ಥಹಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು 85 ಕೋಟಿ ಕಾನೂನು ಬಾಹಿರವಾಗಿ ವರ್ಗಾವಣೆ ಆಗಿದೆ. ಈ ಪ್ರಕರಣದಲ್ಲಿ ಯಾರ್ಯಾರ ಕೈವಾಡ ಇದೆ ಎನ್ನುವುದನ್ನು ಸಹ ಬರೆದಿಟ್ಟಿದ್ದಾರೆ ಎಂದು ಹೇಳಿದರು.

ಬಡವರ, ದಲಿತರ ಹಣವನ್ನು ಹೊಡೆದು ತಿನ್ನುವ ಕೆಲಸ ಆಗಿದೆ. ಭ್ರಷ್ಟಾಚಾರದ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಸಚಿವರ ಬೇಜವಾಬ್ದಾರಿಯಿಂದ ಈ ಘಟನೆಯಾಗಿದೆ ಎನ್ನುವುದು ಮೇಲ್ನೋಟದಿಂದ ತಿಳಿದು ಬರುತ್ತದೆ. ಇದು ದಲಿತರಿಗೆ ಮಾಡಿರುವ ಮೋಸ, ವಂಚನೆ ಎಂದ ಅವರು, ಕಾಂಗ್ರೆಸ್ ಸರ್ಕಾರ ಯಾರನ್ನು ಬಿಡುವುದಿಲ್ಲ ಎಂದರು. ಈ ರೀತಿಯ ಲೂಟಿ ಹೊಡೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ರಾಜ್ಯದ ಜನರೇ ತಲೆತಗ್ಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ ಎಂದ ಅವರು, ಸರ್ಕಾರದ ಈ ಕೃತ್ಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next