ಬೆಂಗಳೂರು: ಈ ಬಾರಿ ನನ್ನನ್ನು ಸಚಿವ ಸಂಪುಟಕ್ಕೆ ಸೇರಿಸದೇ ಇರಲು ಯಾವುದೇ ಕಾರಣವಿಲ್ಲ ಎಂದು ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಹೇಳಿದರು.
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅರಗ ಜ್ಞಾನೇಂದ್ರ ಭೇಟಿಯಾಗಿ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪರನ್ನು ಭೇಟಿಯಾಗಿದ್ದರಲ್ಲಿ ವಿಶೇಷವೇನಿಲ್ಲ. ಬೆಂಗಳೂರಿಗೆ ಬಂದರೆ ಯಡಿಯೂರಪ್ಪರನ್ನು ಭೇಟಿ ಮಾಡುತ್ತೇನೆ ಎಂದರು.
ಇದನ್ನೂ ಓದಿ:ಇಂದೂ ಮುಂದುವರಿಯಲಿದೆ ಸಂಪುಟ ಸರ್ಕಸ್: 15 ಶಾಸಕರಿಗೆ ಮಾತ್ರ ಅವಕಾಶ? ಹಿರಿಯರಿಗೆ ಕೊಕ್?
ಸಂಪುಟದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪಗೆ ನನ್ನ ಮೇಲೆ ಅನುಕಂಪವಿದೆ. ನಾನು ಯಡಿಯೂರಪ್ಪ ಜತೆ ಜೊತೆಯಲ್ಲಿ ಬೆಳೆದವನು. ನನ್ನನ್ನು ಯಡಿಯೂರಪ್ಪ ಗುರುತಿಸುತ್ತಾರೆ. ಸಂಘ ಸಹ ಗುರುತಿಸುತ್ತದೆ. ಈ ಬಾರಿ ಸಚಿವನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.