Advertisement

ಪಂ. ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಯಾವುದೇ ಪ್ರಸ್ತಾಪಕ್ಕೆ ಮುಖ್ಯಮಂತ್ರಿಗಳಿಂದ ತಿರಸ್ಕಾರ

12:26 PM Oct 11, 2022 | Team Udayavani |

ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Advertisement

ಈ ಕುರಿತು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರನ್ನು ಭೇಟಿಯಾಗಿ ಅಂತಹ ಯಾವುದೇ ಪ್ರಸ್ತಾವನೆ ವಿರುದ್ಧ ಪಂಚಾಯತ್ ಜನಪ್ರತಿನಿಧಿಗಳ ಆತಂಕವನ್ನು ಗಮನಕ್ಕೆ ತಂದರು.

ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ, ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮಗಳಿಗೆ ತಿದ್ದುಪಡಿಗೆ ಯಾವುದೇ ತರುವ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ ಎಂದರು.

ಗ್ರಾಮ ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ, ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿದೆ ಎಂದರು.

ಗ್ರಾಮ ಪಂಚಾಯತ್ ವ್ಯವಸ್ಥೆಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರಿಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಬದ್ಧತೆಯಿಂದ ಕೂಡಿದೆ ಎಂದು ಸಚಿವರು ತಿಳಿಸಿದರು.

Advertisement

ಗ್ರಾಮ ಪಂಚಾಯಿತಿಯ ನೌಕರರ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು ಪಂಚಾಯತ್ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿ ಸುವ, ವರದಿಗಳಿಗೆ ಅದನ್ನು ತಿರಸ್ಕರಿಸುವ ಮೂಲಕ ಮುಖ್ಯಮಂತ್ರಿ ತೆರೆ ಎಳೆದಿದ್ದಾರೆ ಎಂದೂ ಸಚಿವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next