Advertisement
ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಕುರಿತು ಹೇಳಿಕೆ ನೀಡುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ತಮ್ಮನ್ನು ಅತ್ಯಾಚಾರ ಮಾಡುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಹಾಗೂ ಸಾರ್ವಜನಿಕರಿಂದ ಟೀಕೆಗಳು ವ್ಯಕ್ತವಾಗಿತ್ತು. ಜತೆಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಸಮಧಾನ ವ್ಯಕ್ತಪಡಿಸಿದ್ದರು.
Related Articles
Advertisement
ಇಂತಹ ವಿಚಾರಗಳಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು. ಇದು ರಾಜಕೀಯ ಮಾಡುವ ಘಟನೆಯೂ ಅಲ್ಲ. ಕಾಂಗ್ರೆಸ್ ಅವಧಿಯಲ್ಲಿ ಏನು ಸುಖವಾಗಿತ್ತಾ? ಇಂತಹ ಘಟನೆಗಳು ಆಗಿರಲಿಲ್ವಾ?ಅವರ ಅವಧಿಯಲ್ಲೂ ನಡೆದಿತ್ತು. ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಆರೋಪ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭ ಪಡೆಯುವುದು ಸರಿಯಲ್ಲ ಎಂದರು.
ತನಿಖೆಗೆ ವಿಶೇಷ ತಂಡಗಳುಪ್ರಕರಣ ಬೇಧಿಸಲು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಪ್ರಕರಣ ಸಂಬಂಧ ಪೋಲಿಸರು ಕಾರ್ಯೋನ್ಮಖರಾಗಿದ್ದು, ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿನಿ ಮೂಲತಃ ಮಹಾರಾಷ್ಟದವರು ಎಂಬ ಮಾಹಿತಿ ಇದೆ. ಅವರ ತಂದೆ, ತಾಯಿ ಸಹ ಆಗಮಿಸಿದ್ದಾರೆ. ಜತೆಗೆ ಮಹಿಳೆಯರು, ಯುವತಿಯರ ಭದ್ರತೆ ಬಗ್ಗೆ ಕ್ರಮಕೈಗೊಳ್ಳಲಾಗುತ್ತದೆ ಎಂದರು. ಪ್ರಕರಣದ ಆರೋಪಿಗಳ ಪತ್ತೆಗೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚಿಸಲಾಗಿದೆ. ಸದ್ಯದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದ ಅವರು, ಶುಕ್ರವಾರ ಇಡೀ ದಿನ ಮೈಸೂರಿನಲ್ಲೇ ಇರುತ್ತೇನೆ. ಸರಣಿ ಸಭೆಗಳನ್ನ ನಡೆಸುತ್ತೇನೆ ಎಂದು ಆರಗ ಜ್ಞಾನೇಂದ್ರ ಹೇಳಿದರು.