Advertisement
ಮಂಗಳವಾರ ಮಲೆನಾಡು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಅಡಕೆ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವೈಜ್ಞಾನಿಕ ಸಂಶೋಧನೆಗಳನ್ನಾಧರಿಸಿ ಅಡಕೆ ಕ್ಯಾನ್ಸರ್ ನಿವಾರಕ ಅಂಶಗಳನ್ನು ಹೊಂದಿದೆ ಎಂಬುದನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಬಲವಾಗಿ ವಿಷಯ ಮಂಡಿಸಿ ಸಮರ್ಥಿಸಿಕೊಳ್ಳಬೇಕಾದ ಅಗತ್ಯವಿದೆ ಎಂದರು.
Related Articles
Advertisement
ಟಾಸ್ಕ್ಫೋರ್ಸ್‌ನ ಚಟುವಟಿಕೆಗಳಿಗಾಗಿ ಮುಂದಿನ ಬಜೆಟ್‌ನಲ್ಲಿ 10 ಕೋಟಿ ರೂ.ಗಳನ್ನು ಕಾಯ್ದಿರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಪ್ರಸ್ತುತ 3.50 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಿದೆ. ಅಡಕೆ ಕಾರ್ಯಪಡೆಯು ಕೃಷಿ ಮತ್ತು ತೋಟಗಾರಿಕೆ ವಿವಿಗಳ ಸಹಯೋಗದಲ್ಲಿ ನಡೆಯುವ ಕೌಶಲ್ಯಾಧಾರಿತ ತರಬೇತಿಗಳಿಗೆ ಅಗತ್ಯ ಸಹಕಾರ ನೀಡಲಿದೆ ಎಂದರು.
ಅಡಕೆಯ ಪರ್ಯಾಯ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸುವಲ್ಲಿ ಅನೇಕರು ಸಕ್ರಿಯರಾಗಿದ್ದಾರೆ. ವಾಣಿಜ್ಯ ಕ್ಷೇತ್ರದಲ್ಲಿ ಬೇರೆ-ಬೇರೆ ವಿಧಾನಗಳಲ್ಲಿ ಅಡಕೆ ಪರಿಚಯಿಸುವುದನ್ನು ಕಾರ್ಯಪಡೆ ಉತ್ತೇಜಿಸಲಿದೆ.
ಶಿರಸಿಯ ಗುರುಮೂರ್ತಿ ಹೆಗಡೆಯವರು ಅಡಕೆಯ ಪರ್ಯಾಯ ಉತ್ಪನ್ನ ಹಾಗೂ ಬಳಸಬಹುದಾದ ಹೊಸ ಸಾಧ್ಯತೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಕೈಗೊಳ್ಳುವ ಸಂಶೋಧನಾ ಚಟುವಟಿಕೆಗಳಿಗೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಅಡಕೆ ಬಳಸಲು ಜನರಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಅಡಕೆಯ ಪರ್ಯಾಯ ಉತ್ಪನ್ನಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಪ್ರಯತ್ನ ನಿರಂತರವಾಗಿರಲಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಎಂಬ ಕೇಂದ್ರ ಪುರಸ್ಕೃತ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ಅನಾನಸ್ ಬೆಳೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ಅಡಕೆಯನ್ನು ಸೇರಿಸುವಂತೆ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.
ಅಡಕೆ ಬೆಳೆ ವಿವಿಧ ರೋಗಗಳಿಂದ ನಾಶವಾಗುತ್ತಿದ್ದು ಅದಕ್ಕೆ ಪರ್ಯಾಯವಾಗಿ ತಾಳೆ ಬೆಳೆ ಉತ್ತೇಜಿಸಲು ಕ್ರಮ ಕೈಗೊಳ್ಳಬೇಕು. ತಾಳೆ ಬೆಳೆಯುವವರಿಗೆ ಪ್ರೋತ್ಸಾಹದ ಜತೆಗೆ ಸರಕಾರವೇ ತಾಳೆ ಎಣ್ಣೆ ಘಟಕ ಸ್ಥಾಪಿಸಬೇಕು. ಭದ್ರಾವತಿಯ ತಾಳೆ ಎಣ್ಣೆ ಘಟಕದ 100 ಎಕರೆ ಪ್ರದೇಶವನ್ನು ಸರಕಾರ ಪಡೆದುಕೊಳ್ಳಬೇಕು. ಈ ಬಗ್ಗೆ ಗಮನ ಸೆಳೆಯುವುದಕ್ಕಾಗಿ ನಿಯೋಗ ತೆರಳಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಅಡಕೆ ಕಾರ್ಯಪಡೆಗೆ ಲಾಲ್‌ಬಾಗ್‌ನಲ್ಲಿ ಕಚೇರಿ ಇದ್ದರೆ ಅನುಕೂಲ ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ :ತೇಗೂರು ಬಳಿ ಚಿರತೆ ಪ್ರತ್ಯಕ್ಷ
ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ ಭಟ್ ಪ್ರತಿಕ್ರಿಯಿಸಿ, ಅಡಕೆ ಬಗ್ಗೆ ಹಳೆಯ ದಾಖಲೆಗಳನ್ನು ಅಡಕೆ ಫೆಡರೇಶನ್ ಕಲೆ ಹಾಕಿದೆ. ಅಡಕೆ ಕ್ಯಾನ್ಸರ್ ನಿವಾರಣೆಗೆ ಅನುಕೂಲ ಎಂಬ ಅಂಶಗಳು ದಾಖಲಾಗಿವೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಶೋಧನೆ ನಡೆದರೆ ಅನುಕೂಲ ಎಂದರು.
ಶಾಸಕ ಹಾಲಪ್ಪ ಮಾತನಾಡಿ, ಕೆಲವು ಪ್ರದೇಶಗಳಲ್ಲಿ ಅಡಕೆಗೆ ಖಾವಿ, ವಾರ್ನಿಷ್ ಇನ್ನಿತರೆ ವಸ್ತು ಸೇರಿಸುತ್ತಿದ್ದಾರೆ. ದಲ್ಲಾಳಿಗಳ ಬಳಿ ಖರೀದಿ ಮಾಡಿದರೆ ಅಪಾಯವಿದೆ. ಸಾಂಪ್ರದಾಯಿಕ ಅಡಕೆ ಬೆಳೆಯುವಲ್ಲಿ ಮಾದರಿ ಪಡೆಯಿರಿ ಎಂದು ಸೂಚಿಸಿದರು. ಇದಕ್ಕೆ ಸಾಕಷ್ಟು ಮಂದಿ ದನಿಗೂಡಿಸಿದರು.
ಸಭೆಯಲ್ಲಿ ಮಲೆನಾಡು ಅಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಲಾಲ್‌ಬಾಗ್‌ನ ಉಪ ನಿರ್ದೇಶಕ ಪ್ರಸಾದ್ ಸೇರಿದಂತೆ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ ಚಂದ್ರ, ಮಾಮೊRàಸ್ ಉಪಾಧ್ಯಕ್ಷ ವೈ.ಎಸ್.ಸುಬ್ರಹ್ಮಣ್ಯ, ತುಮೊRàಸ್ ಅಧ್ಯಕ್ಷ ಎಚ್.ಎಸ್.ಶಿವಕುಮಾರ್, ಕ್ರಾಮ್ ಅಧ್ಯಕ್ಷ ಎಚ್.ಎಸ್. ಮಂಜಪ್ಪ, ಅಡಕೆ ಮಹಾಮಂಡಳಿ ಅಧ್ಯಕ್ಷ ಕೊಂಕೋಡಿ ಪದ್ಮನಾಭ, ಶಿವಮೊಗ್ಗ ಕೃಷಿ-ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ| ಎಂ.ಕೆ. ನಾಯ್ಕ ಮತ್ತಿತರರು ಇದ್ದರು.