Advertisement

ಅರಂತೋಡು: ಗ್ರಾ.ಪಂ. ಪಿಡಿಒ ಯು.ಡಿ. ಶೇಖರ್ ನಿಧನ

10:24 AM Nov 03, 2022 | Team Udayavani |

ಅರಂತೋಡು: ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗ್ಗೆ ಅರಂತೋಡಿನ ಅವರ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಮನೆಯವರು ಸುಳ್ಯ ಆಸ್ಪತ್ರೆಗೆ ಕರೆತಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾರೆ ಎಂದು ತಿಳಿದು ಬಂದಿದೆ.

Advertisement

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ದೀರ್ಘ ಕಾಲ ಸೇವೆ ಸಲ್ಲಿದ್ದ ಶೇಖರ್ ರವರು ಬಳಿಕ ಸುಬ್ರಹ್ಮಣ್ಯ ಗ್ರಾ.ಪಂ. ಪಿಡಿಒ ಆಗಿ ವರ್ಗಾವಣೆಯಾಗಿದ್ದರು.

ಮೃತರು ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗೀತಾ ಶೇಖರ್ , ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next