Advertisement
ರಸ್ತೆ ಹಾದು ಹೋಗುವ ಜಾಗ ಅರಣ್ಯ ಹಾಗೂ ವನ್ಯಜೀವಿ ಭಾಗ ಬರುತ್ತಿರುವುದರಿಂದ ಅರಣ್ಯ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಜಂಟಿ ಸರ್ವೇ ಕಾರ್ಯ ನಡೆಸಿ ಕಡತವನ್ನು ಮತ್ತೆ ಅರಣ್ಯ ಭವನಕ್ಕೆ ಅಪ್‌ಲೋಡ್ ಮಾಡಿದೆ.
Related Articles
ಈಗಿರುವ ರಸ್ತೆಯಲ್ಲಿ ಹುಣೂಸೂರಿನಿಂದ ಮಡಿಕೇರಿಯಾಗಿ ಸುಳ್ಯಕ್ಕೆ 131 ಕಿ.ಮೀ. ದೂರವಾಗುತ್ತದೆ. ಬದಲಾಗಿ ಹುಣುಸೂರುನಿಂದ ವಿರಾಜಪೇಟೆ-ಭಾಗಮಂಡಲಕ್ಕಾಗಿ ಪಟ್ಟಿ- ತೊಡಿಕಾನ- ಕೊಡಗಿನ ಪೆರಾಜೆಯಾಗಿ ಬಂದರೆ 145 ಕಿ.ಮೀ ದೂರವಾಗುತ್ತದೆ. ಹುಣುಸೂರು-ಭಾಗಮಂಡಲ (ರಾಜ್ಯ ಹೆದ್ದಾರಿ) 109 ಕಿ.ಮೀ., ಭಾಗಮಂಡಲ-ಬಾಚಿಮಲೆ (ಅಂತರ್ ರಾಜ್ಯ ಹೆದ್ದಾರಿ) 9 ಕಿ.ಮೀ., ಬಾಚಿಮಲೆ-ಪಟ್ಟಿ-ತೊಡಿಕಾನ (ಅಭಿವೃದ್ಧಿ ಆಗಬೇಕಾದ ರಸ್ತೆ) 9 ಕಿ.ಮೀ., ತೊಡಿಕಾನ-ಪೆರಾಜೆ ಜಿಲ್ಲಾ ಪಂಚಾಯತ್ 11 ಕಿ.ಮೀ., ಪೆರಾಜೆ-ಸುಳ್ಯ (ರಾಜ್ಯ ಹೆದ್ದಾರಿ) 7.ಕಿ.ಮೀ. ಹೀಗೆ ಒಟ್ಟು 145 ಕಿ.ಮೀ. ದೂರವಾಗುತ್ತದೆ. ಈ ಮಾರ್ಗದಲ್ಲಿ ಮಾಚಿಮಲೆ-ಪಟ್ಟಿ-ತೊಡಿಕಾನ ರಸ್ತೆ ಅಭಿವೃದ್ಧಿಗೆ 2013-14ನೇ ಸಾಲಿನಲ್ಲಿ ರಾಜ್ಯ ಸರಕಾರದಿಂದ 5 ಕೋಟಿ ರೂ. ಮಂಜೂರುಗೊಂಡಿದೆ.
Advertisement
ದೂರ ಕಡಿಮೆಯಾಗಲಿದೆಈ ರಸ್ತೆ ಅಭಿವೃದ್ಧಿಯಾದಲ್ಲಿ ಸಂಪಾಜೆ-ಮಡಿಕೇರಿ ರಸ್ತೆಗೆ ಪರ್ಯಾಯ ರಸ್ತೆಯಾಗಿ ರೂಪುಗೊಂಡು ಆ ರಸ್ತೆಯ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಹಾಗೆಯೇ ದಕ್ಷಿಣ ಭಾರತದ ಪ್ರಸಿದ್ದ ತೀರ್ಥ ಕ್ಷೇತ್ರಗಳಾದ ಭಾಗಮಂಡಲ/ತಲಕಾವೇರಿಯಿಂದ ಸುಬ್ರಹ್ಮಣ್ಯ- ಧರ್ಮಸ್ಥಳಕ್ಕೆ ಪ್ರಯಾಣಿಸಲು ಅತೀ ಹತ್ತಿರದ ರಸ್ತೆಯಾಗಲಿದೆ. ರಸ್ತೆ ಅಭಿವೃದ್ಧಿಯಾದರೆ ಈ ದಾರಿಯಲ್ಲಿ ಭಾಗಮಂಡಲದಿಂದ ಸುಬ್ರಹ್ಮಣ್ಯಕ್ಕೆ ಈಗಿರುವ ಸುಮಾರು 145 ಕಿ.ಮೀ. ದೂರ ಕೇವಲ 50 ಕಿ.ಮೀ. ಆಗಲಿದೆ. ಕಾವೇರಿ ರಸ್ತೆ
ಈ ರಸ್ತೆಯು ಸರಕಾರಿ ದಾಖಲೆಗಳಲ್ಲಿ ಕಾವೇರಿ ರಸ್ತೆಯೆಂದು ನಮೂದಾಗಿದೆ. ಭಾಗಮಂಡಲ ಕ್ಷೇತ್ರಕ್ಕೆ ಧಾರ್ಮಿಕ ಮತ್ತು ಪೂಜಾದಿಗಳ ಸಂಬಂಧ ಇರುವ ತೊಡಿಕಾನ ಮಲ್ಲಿಕಾರ್ಜುನ ದೇವಸ್ಥಾನ, ಪೆರಾಜೆ ಶಾಸ್ತವೇಶ್ವರ ದೇವಸ್ಥಾನ ಆಡೂರು ಮಹಾಲಿಂಗೇಶ್ವರ ದೇವಸ್ಥಾನಗಳಿಗೆ ಸಂಪರ್ಕ ಕಲ್ಪಿಸಿ ಪ್ರಸ್ತಾವಿತ ಭಾಗಮಂಡಲ ತಲಕಾವೇರಿ ಕ್ಷೇತ್ರಗಳ ಅಭಿವೃದ್ಧಿಗೆ ಪೂರಕವಾಗಲಿದೆ. ಮುಖ್ಯವಾಗಿ ಮಾಣಿ-ಮೈಸೂರು ರಾಜ್ಯ ಹೆದ್ದಾರಿಗೆ ಒಂದು ಪರ್ಯಾಯ ರಸ್ತೆಯಾಗಿ ರೂಪುಗೊಳ್ಳಲಿದೆ. ಪರ್ಯಾಯ ರಸ್ತೆಯಾಗಲಿದೆ
ತೊಡಿಕಾನ-ಪಟ್ಟಿ-ಬಾಚಿಮಲೆ ರಸ್ತೆ ಅಭಿವೃದ್ಧಿ ಅಗತ್ಯ ಇದೆ. ಭವಿಷ್ಯದಲ್ಲಿ ಮಾಣಿ-ಮೈಸೂರು ರಸ್ತೆಯ ಮೂಲಕ ಮಡಿಕೇರಿ ಸಂಪರ್ಕ ಏನಾಗಬಹುದು ಎಂದು ಉಹಿಸಲು ಅಸಾಧ್ಯ. ಈ ರಸ್ತೆ ಅಭಿವೃದ್ಧಿಯಾದರೆ ಮಡಿಕೇರಿ ಜಿಲ್ಲಾ ಕೇಂದ್ರ ಹಾಗೂ ತಲಕಾವೇರಿ, ಭಾಗಮಂಡಲ ಸಂಪರ್ಕಕ್ಕೆ ಪರ್ಯಾಯ ರಸ್ತೆಯಾಗಲಿದೆ.
– ವಸಂತ ಭಟ್
ತೊಡಿಕಾನ ರಸ್ತೆ ಅಭಿವೃದ್ಧಿ ಹೋರಾಟಗಾರ ತೇಜೇಶ್ವರ್ ಕುಂದಲ್ಪಾಡಿ