Advertisement

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

09:16 AM May 03, 2024 | Team Udayavani |

ಅರಂತೋಡು: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡು, ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ದ‌.ಕ. ಸಂಪಾಜೆ ಎಂಬಲ್ಲಿ ಮೇ.3ರ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

Advertisement

ವಿಟ್ಲದ ಅಡ್ಯನಡ್ಕದ ದಂಪತಿಗಳು ಕಾರಿನಲ್ಲಿ ಮಡಿಕೇರಿ ಕಡೆಗೆ ಹೋಗುತ್ತಿದ್ದ ವೇಳೆ ಸಂಪಾಜೆಯ ಹೈವೆ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೋಟೆಲಿನ ಮುಂಭಾಗದ ಗೋಡೆಗೆ ಢಿಕ್ಕಿ ಹೊಡೆದಿದೆ.

ಈ ಪರಿಣಾಮ ಕಾರು ಚಾಲಕ ಹಾಗೂ ಮುಂಭಾಗದಲ್ಲಿ ಕುಳಿತಿದ್ದ ಅವರ ಪತ್ನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ಸೇರಿ ಅಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next