Advertisement

ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿರುವ ಅರವಿಂದ್ ಕೇಜ್ರಿವಾಲ್

10:03 AM Mar 04, 2020 | keerthan |

ಹೊಸದಿಲ್ಲಿ: ಮೂರನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.

Advertisement

ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ವಿಜಯಿಯಾಗುತ್ತಿದ್ದಂತೆ ಅರವಿಂದ್ ಕೇಜ್ರಿವಾಲ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ನಂತರ ಟ್ವೀಟ್ ಮಾಡಿದ್ದ ಕೇಜ್ರಿವಾಲ್, ಅಮಿತ್ ಶಾ ಅವರನ್ನು ಭೇಟಿಯಾಗಿ ಸಂತಸವಾಗಿದೆ. ಉತ್ತಮ ಚರ್ಚೆ ನಡೆಯಿತು. ದಿಲ್ಲಿಯ ವಿಚಾರಗಳ ಬಗ್ಗೆ ಮಾತನಾಡಲಾಗಿದೆ ಎಂದಿದ್ದರು.

ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅರವಿಂದ್ ಕೇಜ್ರಿವಾಲ್ 11 ಗಂಟೆಗೆ ಭೇಟಿಯಾಗಲಿದ್ದಾರೆ. ಪೌರತ್ವ ಕಾಯ್ದೆ ವಿರುದ್ಧ ನಡೆಯುತ್ತಿರುವ ಬಲಭೆ, ಹಿಂಸಾಚಾರದ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next