Advertisement

ನಿರ್ಮಾಪಕ ರಾಮು ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ

09:25 PM Apr 26, 2021 | Team Udayavani |

ಬೆಂಗಳೂರು: ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಅವರ ನಿಧನಕ್ಕೆ ಸಚಿವ ಅರವಿಂದ ಲಿಂಬಾವಳಿ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

ಕನ್ನಡ ಚಲನಚಿತ್ರರಂಗದಲ್ಲಿ 30ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಾಣ ಮಾಡಿದ್ದ ರಾಮು ಅವರು ಕನ್ನಡದಲ್ಲಿ ಅದ್ದೂರಿ ಚಿತ್ರಗಳ ಟ್ರೆಂಡ್ ಹುಟ್ಟು ಹಾಕಿದಂತಹ ನಿರ್ಮಾಪಕ. ಇವರನ್ನು ಬಲಿ ತೆಗೆದುಕೊಂಡ ಕೋವಿಡ್ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಮತ್ತೊಂದು ಆಘಾತ ಕೊಟ್ಟಿದೆ.

ಲಾಕಪ್ ಡೆತ್, ಎಕೆ 47, ಕಲಾಸಿಪಾಳ್ಯ, ಮುಂತಾದ ಸೂಪರ್ ಹಿಟ್ ಚಿತ್ರಗಳ ನಿರ್ಮಾಪಕರಾಗಿ ಕನ್ನಡಕ್ಕೆ ಹೊಸ ರೀತಿಯ ಚಿತ್ರಗಳನ್ನು ಕೊಡುಗೆಯಾಗಿ ಕೊಟ್ಟಿದ್ದರು. ನಿರ್ಮಾಪಕರಾಗಿ, ವಿತರಕರಾಗಿ ಅವರು ಕನ್ನಡ ಚಿತ್ರರಂಗಕ್ಕೆ ಕೊಟ್ಟ ಕೊಡುಗೆ ಬಹಳ ದೊಡ್ಡದು. ಖ್ಯಾತ ನಟಿ ಮಾಲಾಶ್ರೀ ಅವರನ್ನ ವರಿಸಿ ಅವರನ್ನೇ ಮುಖ್ಯಭೂಮಿಕೆಯಲ್ಲಿ ಇಟ್ಟುಕೊಂಡು ಅನೇಕ ಚಿತ್ರಗಳನ್ನು ಕೊಡುಗೆಯಾಗಿ ಕೊಟ್ಟಿದ್ದವರು, ಅವರ ನಿಧನ ಕನ್ನಡ ಚಿತ್ರರಂಗಕ್ಕೆ ನಿಜಕ್ಕೂ ಬಹಳ ದೊಡ್ಡ ನಷ್ಟ.

ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ,ಮಾಲಾಶ್ರೀ ಮತ್ತು ಅವರ ಕುಟುಂಬ ವರ್ಗಕ್ಕೆ ಆ ಭಗವಂತನು ಕರುಣಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next