Advertisement

ಕಟ್ಟಡ ಕಾರ್ಮಿಕರಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸಲು ಸಚಿವ ಅರವಿಂದ ಲಿಂಬಾವಳಿ ಸೂಚನೆ

10:28 PM May 24, 2021 | Team Udayavani |

ಬೆಂಗಳೂರು : ಕಟ್ಟಡ ಕಾರ್ಮಿಕರು ಸೇರಿದಂತೆ ಇತರ ಕಾರ್ಮಿಕರಿಗೆ ಕೋವಿಡ್-19 ಪರೀಕ್ಷೆ ಸಂಖ್ಯೆ ಹೆಚ್ಚಿಸಲು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

Advertisement

ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ್- 19 ನಿಯಂತ್ರಿಸಲು ಕೈಗೊಂಡ ಕ್ರಮಗಳ ಕುರಿತು ನೋಡಲ್ ಅಧಿಕಾರಿಗಳು ಸೇರಿದಂತೆ ಇತರರೊಂದಿಗೆ ವರ್ಚುಯಲ್ ಮೂಲಕ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು.

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಿನನಿತ್ಯ ಕನಿಷ್ಠ 200 ಕೋವಿಡ್ ಪರೀಕ್ಷೆಗಳಂತೆ ಟೆಸ್ಟ್ ಪ್ರಮಾಣ ಹೆಚ್ಚಿಸಬೇಕು , ಇದರಿಂದ ಕೋವಿಡ್ ನಿಯಂತ್ರಿಸಬಹುದು ಎಂದು ಅವರು ಹೇಳಿದರು.

ಇದನ್ನೂ ಓದಿ :ಖ್ಯಾತ ನೃತ್ಯ ಕಲಾವಿದೆ ಬಿ. ಭಾನುಮತಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಈ ವೇಳೆ ಆವಲಹಳ್ಳಿ ಭಾಗದ ಪಿ ಎಚ್ ಸಿ ಯಲ್ಲಿ ಕೋವಿಡ್ ಲಸಿಕೆ ಕುರಿತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಬಗ್ಗೆ ವಿಚಾರಿಸಿದ ಅವರು ಎಲ್ಲರಿಗೂ ಲಸಿಕೆ ಸಿಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

Advertisement

ಬಳಿಕ ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿನ ಕೋವಿಡ್ ಪಾಸಿಟಿವ್ ಕೇಸ್, ಗುಣಮುಖರಾದವರು, ಹೋಮ್ ಐಸೋಲೇಷನ್ ನಲ್ಲಿರುವವರ ಮಾಹಿತಿ ಪಡೆದರು.

ಹೋಮ್ ಐಸೋಲೇಷನ್ ನಲ್ಲಿ ಇರುವವರಿಗೆ ವಾರ್ ರೂಮ್ ಗಳ ಮೂಲಕ ನಿತ್ಯ ಎರಡು ಬಾರಿ ಕರೆ ಮಾಡಿ ಆರೋಗ್ಯ ವಿಚಾರಿಸಬೇಕು ಎಂದ ಅವರು
ಕೋವಿಡ್ ಪರೀಕ್ಷೆ ಮತ್ತು ಲಸಿಕೆಯನ್ನು ನೀಡುವುದಕ್ಕೆ ಪ್ರತ್ಯೇಕ ಸ್ಥಳ ನಿಗದಿ ಮಾಡಬೇಕು ಎಂದು ತಿಳಿಸಿದರು.

ಮಾಸ್ಕ್, ಸ್ಯಾನಿಟೈಸರ್, ಸುರಕ್ಷಿತ ಅಂತರ ಪಾಲಿಸುವ ಮೂಲಕ ಕೋವಿಡ್ ಕುರಿತು ಭಯ ಪಡೆದೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಲು ಸೂಚಿಸಿದರು.

ವರ್ಚುಯಲ್ ಸಭೆಯಲ್ಲಿ ತಹಶೀಲ್ದಾರರಾದ ಶ್ರೀ ಅಜೀತ ರೈ, ತಾಲ್ಲೂಕು ಪಂಚಾಯತ ಇಒ ಶ್ರೀ ಮಂಜುನಾಥ, ಶ್ರೀ ಚಂದ್ರಶೇಖರ, ನೋಡಲ್ ಅಧಿಕಾರಿಗಳು, ವಾರ್ ರೂಮ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಸ್ವಯಂ ಸೇವಕರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು , ಪೊಲೀಸ್ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು .

Advertisement

Udayavani is now on Telegram. Click here to join our channel and stay updated with the latest news.

Next