Advertisement

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

12:44 PM Apr 18, 2024 | Team Udayavani |

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಕೃತಕ ನೀರಿನ ಅಭಾವ ಸೃಷ್ಟಿಸಿ ದುಬಾರಿ ಬೆಲೆಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಸರಕಾರ ಸೃಷ್ಟಿಸಿರುವ ಟ್ಯಾಂಕರ್ ಲಾಬಿ ಎಂದು ಶಾಸಕ ಅರವಿಂದ ಬೆಲ್ಲದ ಆರೋಪಿಸಿದರು.

Advertisement

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ನೀರು ಪೂರೈಸಲು ಸರಕಾರಕ್ಕೆ ನೀರಿಲ್ಲ. ಆದರೆ ಟ್ಯಾಂಕರ್ ಮಾಲೀಕರಿಗೆ ನೀರು ಎಲ್ಲಿಂದ ಸಿಗುತ್ತಿದೆ. ಇದು ಸರಕಾರ ಸೃಷ್ಟಿಸಿರುವ ನೀರಿನ ಕೃತಕ ಅಭಾವ ಎನ್ನುವುದರಲ್ಲಿ ಅನುಮಾನವಿಲ್ಲ. ಒಂದು ಟ್ಯಾಂಕರ್ ನೀರು ಐದು ಸಾವಿರ ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಈ ಟ್ಯಾಂಕರ್ ಲಾಬಿ ಹಿಂದೆ ಸರ್ಕಾರ ನೇರವಾಗಿ ಭಾಗಿಯಾಗಿದೆ. ಅಲ್ಲಿನ ಜಲ ಮಂಡಳಿ ಅಧಿಕಾರಿಗಳ ಮೂಲಕ ನೀರಿನ ಕಳ್ಳ ಸಾಗಾಣಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಶ್ರೀಗಳ ಸ್ಪರ್ಧೆ ಬಿಜೆಪಿಗೆ ನಷ್ಟವಿಲ್ಲ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಯಸ್ಸು ಹಾಗೂ ಆರೋಗ್ಯದ ಹಿನ್ನೆಲೆಯಲ್ಲಿ ಅವರೇ ಖುಷಿಯಿಂದ  ಅಧಿಕಾರ ಬಿಟ್ಟುಕೊಟ್ಟರು. ರಾಜಕೀಯ ಕುತಂತ್ರಕ್ಕೆ ಬಲಿಯಾದರೂ ಎನ್ನುವ ದಿಂಗಲೇಶ್ವರ ಸ್ವಾಮೀಜಿ ಹೇಳಿಕೆಯಲ್ಲಿ ಹುರುಳಿಲ್ಲ. ಸ್ವಾಮೀಜಿ ಅವರ ಸ್ಪರ್ಧೆಯಿಂದ ಬಿಜೆಪಿಗೆ ಯಾವುದೇ ನಷ್ಟವಿಲ್ಲ ಎಂದರು.

ಪಕ್ಷದ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಅಭಿವೃದ್ಧಿ ಕಾರ್ಯಗಳು, ಎಲ್ಲಾ ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ನಾಯಕತ್ವ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಸ್ವಾಮೀಜಿಗಳು ಇದೀಗ ಚುನಾವಣೆಗೆ ಸ್ಪರ್ಧಿಸಿರುವುದರಿಂದ ಅವರ ಹೇಳಿಕೆಗಳು ರಾಜಕೀಯದಿಂದ ಕೂಡಿವೆ. ಇಂತಹ ಹೇಳಿಕೆಗಳ ಬಗ್ಗೆ ಅಷ್ಟೊಂದು ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದರು

Advertisement

Udayavani is now on Telegram. Click here to join our channel and stay updated with the latest news.

Next