Advertisement
ತಾಲೂಕಿನ ಲಕ್ಕುಂಡಿಯ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಮೈಸೂರಿನ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 13 ಆರಕ್ಷಿತ ಸ್ಮಾರಕಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಅತ್ಯಂತ ಪ್ರಾಮುಖ್ಯತೆ ಹೊಂದಿರುವ ಲಕ್ಕುಂಡಿಯನ್ನು ಚಾಲುಕ್ಯರು ಠಂಕಸಾಲೆಯನ್ನಗಿಸಿಕೊಂಡಿದ್ದರು. ಆ ಕಾಲದ ಇತಿಹಾಸ, ಸಂಸ್ಕೃತಿ, ವೈಭವದ ಮೆರಗು, ಸಂಭ್ರಮ ಮರುಕಳಿಸುವಂತೆ ಆಂದೋಲನ ಪ್ರಾರಂಭಿಸಿ ಅದಕ್ಕೆ ಎಲ್ಲರು ಪ್ರಾಮಾಣಿಕ ಪ್ರಯತ್ನ ಮಾಡುವ ಕೆಲಸವಾಗಬೇಕು ಎಂದರು.
”ಹುಬ್ಬಳ್ಳಿ ಹುಡಿ ಹಾರಬೇಕು, ಗದಗು ಗದ್ದುಗೆಯಾಗಬೇಕು, ಲಕ್ಕುಂಡಿ ಲೆಕ್ಕಾಗಬೇಕು ಈ ಮಾತು ನಿಜವಾಗಬೇಕಾದರೆ ಲಕ್ಕುಂಡಿಯಲ್ಲಿ ಹುದುಗಿರುವ ಶಿಲ್ಪಕಲೆಗಳು ಕಾಣುವಂತಾಗಬೇಕು. ಈ ಹಿನ್ನೆಲೆಯಲ್ಲಿ ಉತ್ಖನನ ಆರಂಭಿಸಿಲು ಈಗಾಗಲೇ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರಿಗೆ ಸೂಚನೆ ನೀಡಲಾಗಿದೆ. ಲಕ್ಕುಂಡಿಯಲ್ಲಿ ಎಲ್ಲೆಲ್ಲಿ ಉತ್ಖನನ ಮಾಡಬೇಕು, ಒಂದು ವರ್ಷದಲ್ಲಿ ಎಷ್ಟು ಉತ್ಖನನ ಮಾಡಲು ಸಾಧ್ಯ, ಅದಕ್ಕೆ ಬೇಕಾಗುವ ಹಣವನ್ನು ಮುಂದಿನ ಬಜೆಟ್‌ನಲ್ಲಿ ತೆಗೆದಿಡುವ ಹಾಗೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇವೆ” ಎಂದು ಎಚ್.ಕೆ. ಪಾಟೀಲ ಹೇಳಿದರು.
ಶಾಸಕ ಸಿ.ಸಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ, ರೋಣ ಶಾಸಕ ಜಿ.ಎಸ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಸೇರಿ ಹಲವರು ಇದ್ದರು.