ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು, ನಿಯಮಗಳಲ್ಲಿ ಇನ್ನಷ್ಟು ಸಡಿಲಿಕೆ ಸಾಧ್ಯತೆ ಇದೆ.ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಸೋಂಕಿತ ತೀವ್ರತೆ ಕಡಿಮೆ ಇದೆ. ಹೀಗಾಗಿ ಸದ್ಯ ಇರುವ ಕಠಿಣ ನಿಯಮಗಳನ್ನ ಸರ್ಕಾರ ಸಡಿಲಿಸುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ:ಈ ಒಂದು ನಿಯಮ ಇದ್ದಿದ್ದರೆ ಸಚಿನ್ ಲಕ್ಷ ರನ್ ಗಳಿಸುತ್ತಿದ್ದರು..: ಅಖ್ತರ್
ಕೇವಲ ನೈಟ್ ಕರ್ಫ್ಯೂ ಮತ್ತು 50:50 ರೂಲ್ಸ್ ಜಾರಿಯಲ್ಲಿದೆ. ಇವುಗಳನ್ನೂ ಕೈ ಬಿಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಒಂದು ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ಆರೋಗ್ಯ ಸಚಿವ ಕಂದಾಯ ಸಚಿವ, ಗೃಹ ಸಚಿವ, ಉನ್ನತ ಶಿಕ್ಷಣ ಸಚಿವ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ, ಇಲಾಖಾ ಕಾರ್ಯದರ್ಶಿಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಲಿದ್ದಾರೆ.
ವಿಶೇಷವಾಗಿ ಬೆಂಗಳೂರಿನಲ್ಲಿ ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಇಂದಿನ ಸಭೆಯಲ್ಲಿ ಸ್ಪಷ್ಟತೆ ಸಿಗಲಿದೆ. ಮಾರ್ಷಲ್ ಗಳು ಕಾರ್ಯ ವೈಖರಿ ಬಗ್ಗೆಯೂ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿದ್ದು, ಬಿಬಿಎಂಪಿಗೆ ಕೆಲವಷ್ಟು ನಿರ್ದೇಶನ ನೀಡುವ ಸಾಧ್ಯತೆ ಇದೆ. ಆದರೆ ನೈಟ್ ಕರ್ಪ್ಯೂ ಸಂಪೂರ್ಣವಾಗಿ ತೆಗೆದು ಹಾಕುವುದಕ್ಕೆ ಸಲಹಾ ಸಮಿತಿ ವಿರೋಧ ವ್ಯಕ್ತಪಡಿಸಬಹುದು ಎಂದು ಹೇಳಲಾಗುತ್ತಿದೆ.