Advertisement

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚನೆ

08:58 PM May 13, 2021 | Team Udayavani |

ಕಾರವಾರ : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಮೇ. 15 ಹಾಗೂ 16 ರಂದು ಜಿಲ್ಲೆಯಲ್ಲಿ ಪ್ರತೀ ಗಂಟೆಗೆ 70-80 ಕಿಮೀ ವೇಗದಲ್ಲಿ ಗಾಳಿ ಬೀಸುವ ಹಾಗೂ 120-200 ಮಿ.ಮೀ. ಮಳೆ ಬೀಳುವ ಮುನ್ಸೂಚನೆಯಿದ್ದು  ಜಿಲ್ಲೆಯ ಎಲ್ಲ ಮೀನುಗಾರರು ಹಾಗೂ ಸಾರ್ವಜನಿಕರು ಸಮುದ್ರದ ಕಡೆಗೆ ಬರೆದಿರುವಂತೆ ಎಚ್ಚರಿಕೆ ನೀಡಲಾಗಿದೆ. ಈ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

Advertisement

ಗಾಳಿ, ಮಳೆ ಸಂದರ್ಭದಲ್ಲಿ ಮಕ್ಕಳು ಸಾರ್ವಜನಿಕರು ಸಮುದ್ರದ ಕಡೆಗೆ ಬರಬಾರದು. ಜೊತೆಗೆ ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಹಾಗೂ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳಬೇಕು. ಮಳೆ, ಗಾಳಿಯಿಂದ ಉಂಟಾಗುವ ಹಾನಿಯನ್ನು ತಪ್ಪಿಸಲು ಇರುವಂತಹ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.

ಇದನ್ನೂ ಓದಿ :ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಸಾವು

ಸಾರ್ವಜನಿಕರು ಇಂತಹ ಸಂದರ್ಭದಲ್ಲಿ ತುರ್ತು ಸೇವೆಗಾಗಿ ಇಲಾಖೆಯ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್‌ ರೂಂನ ಟೋಲ್ ಫ್ರೀ ಸಂಖ್ಯೆ: 1077 ಅಥವಾ ವಾಟ್ಸಪ್ ಸಂಖ್ಯೆ: 9483511015ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಹೆಚ್ .ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next