Advertisement

“ಅರಿವು’ಯೋಜನೆಯಲ್ಲಿ ಭೇದ : ಅಲ್ಪಸಂಖ್ಯಾಕರಿಗೆ ಮಾತ್ರ ನೆರವು

12:31 PM Aug 27, 2022 | Team Udayavani |

ಮಂಗಳೂರು : ವೃತ್ತಿಪರ ಶಿಕ್ಷಣ ಕೋರ್ಸ್‌ಗೆ ಸೇರುವ ವಿದ್ಯಾರ್ಥಿಗಳಲ್ಲಿ ಈ ವರ್ಷವೂ ಅಲ್ಪಸಂಖ್ಯಾಕರಿಗೆ ಮಾತ್ರ “ಅರಿವು’ ಸಾಲದ ನೆರವು ಪ್ರಕಟಗೊಂಡಿದೆ. ನಿರಂತರ 3 ವರ್ಷಗಳಿಂದ ನಮಗೆ ಈ ಸೌಲಭ್ಯ ಸಿಗುತ್ತಿಲ್ಲ. ಇದು ಯಾವ ನೀತಿ ಎಂದು ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಪೋಷಕರು ಪ್ರಶ್ನಿಸುತ್ತಿದ್ದಾರೆ.

Advertisement

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಹಲವು ವೃತ್ತಿಪರ ಕೋರ್ಸ್‌ಗಳಿಗೆ ಸೇರುವುದಕ್ಕೆ ಶೇ. 2ರ ಕಡಿಮೆ ಬಡ್ಡಿದರಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿತ್ತು. ಪ್ರತಿವರ್ಷ ಜುಲೈ ವೇಳೆಗೆ ಅರ್ಜಿ ಆಹ್ವಾನಿಸಿ ಸಿಇಟಿ ಮೂಲಕ ಪ್ರವೇಶ ಪಡೆಯುವ ವೃತ್ತಿಪರ ಕೋರ್ಸ್‌ಗಳಲ್ಲಿ ಕಲಿಯುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕ 50 ಸಾವಿರದಿಂದ ಗರಿಷ್ಠ 1 ಲಕ್ಷ ರೂ. ವರೆಗೆ ಸಾಲ ನೀಡಲಾಗುತ್ತದೆ.

ಸಿಇಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸೀಟು ಪಡೆಯುವ ಹಂತದಲ್ಲೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀûಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಲಾಗುತ್ತದೆ.

ಯೋಜನೆಗೆ ಪ್ರತಿವರ್ಷವೂ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಈಗಾಗಲೇ ಕರ್ನಾಟಕ ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮ ಅರ್ಜಿ ಆಹ್ವಾನಿಸಿದೆ. ಆದರೆ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಈ ಬಾರಿಯೂ ಅರ್ಜಿ ಆಹ್ವಾನಿಸಿಲ್ಲ. ಕಳೆದ ಸಾಲಿನಲ್ಲೂ ಅನುದಾನ ಕೊರತೆ, ಕೋವಿಡ್‌ ಮುಂತಾದ ಕಾರಣದಿಂದ ಅರಿವು ನೆರವು ಸಿಕ್ಕಿರಲಿಲ್ಲ.
ಈಗಾಗಲೇ ಸಿಇಟಿ ಫ‌ಲಿತಾಂಶ ಬಂದು ಪ್ರವೇಶ ಆರಂಭವಾಗುತ್ತಿರುವ ಕಾರಣ ವಿದ್ಯಾರ್ಥಿಗಳು ಹಾಗೂ ಹೆತ್ತವರು ಅರಿವು ಯೋಜನೆ ಕುರಿತು ನಿಗಮದ ಕಚೇರಿಯಲ್ಲಿ ವಿಚಾರಿಸುತ್ತಿದ್ದಾರೆ.

ಇದನ್ನೂ ಓದಿ : ಗಣೇಶ ಹಬ್ಬದಲ್ಲಿ ಮಾರ್ಗಸೂಚಿ ಪಾಲಿಸಿ : ಗಣೇಶೋತ್ಸವ ಸಮಿತಿಗಳ ಆಯೋಜಕರ ಸಭೆಯಲ್ಲಿ ಸಲಹೆ

Advertisement

ಅಲ್ಪಸಂಖ್ಯಾಕರಿಗೆ ಮಾತ್ರ ಒಲವು
ದೇವರಾಜ ಅರಸು ಅವರ ಜನ್ಮದಿನಾಚರಣೆ ಸಂದರ್ಭ ನಿಗಮಕ್ಕೆ ಬಂದಿದ್ದ ಮುಖ್ಯಮಂತ್ರಿಗಳ ಗಮನಕ್ಕೆ ಈ ವಿಚಾರವನ್ನು ತರಲಾಗಿದ್ದು, ಸ್ಥಗಿತಗೊಂಡಿರುವ ಎಲ್ಲ ಯೋಜನೆಗಳನ್ನೂ ಮತ್ತೆ ಆರಂಭಿಸುವುದಾಗಿ ಹೇಳಿದ್ದಾರೆ. ಅದರಂತೆ ಈ ವರ್ಷದಿಂದ ಮತ್ತೆ ಅರಿವು ಯೋಜನೆ ಆರಂಭಿಸುತ್ತೇವೆ.
– ಕೋಟ ಶ್ರೀನಿವಾಸ ಪೂಜಾರಿ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಖಾತೆ ಸಚಿವ

ವೇಣುವಿನೋದ್‌ ಕೆ. ಎಸ್‌.

Advertisement

Udayavani is now on Telegram. Click here to join our channel and stay updated with the latest news.

Next