Advertisement

ಕಾಂಗ್ರೆಸ್‌ ಯುದ್ಧಕ್ಕೆ ಮೊದಲೇ ಶಸ್ತ್ರ ತ್ಯಾಗ: ಕಟೀಲ್‌

09:49 AM Nov 30, 2019 | Team Udayavani |

ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರ ನಡುವೆ ಹೊಂದಾಣಿಕೆ ಕೊರತೆ ಇದ್ದು ಯುದ್ಧಕ್ಕೆ ಮೊದಲೇ ಶಸ್ತ್ರ ತ್ಯಜಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

Advertisement

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ಬಿಜೆಪಿ ಹದಿನೈದು ಕ್ಷೇತ್ರ ಗೆಲ್ಲಲಿದೆ ಎಂದು ತಿಳಿಸಿದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ ಯಾವುದೇ ವಿಷಯಗಳೇ ಇಲ್ಲ. ಇಲ್ಲಸಲ್ಲದ ಆರೋಪಗಳ ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಮಾತನಾಡಿ, ಉಪ ಚುನಾವಣೆಯಲ್ಲಿ ಬಿಜೆಪಿ ಹದಿನೈದು ಕ್ಷೇತ್ರ ಗೆಲ್ಲಲಿದೆ. ಜೆಡಿಎಸ್‌ ಬೆಂಬಲ ಪಡೆಯುವ ಸ್ಥಿತಿ ನಿರ್ಮಾಣವಾಗುವುದಿಲ್ಲ ಎಂದು ಹೇಳಿದರು.

ಸಚಿವ ಆರ್‌.ಅಶೋಕ್‌ ಮಾತನಾಡಿ, ಉಪ ಚುನಾವಣೆ ಮುಗಿದ ನಂತರ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಕಂಟಕ ಎದುರಾಗಲಿದೆ. ಪ್ರತಿಪಕ್ಷ ಸ್ಥಾನದಿಂದಲೇ ಅವರನ್ನು ಕೆಳಗಿಳಿಸಲಾಗುತ್ತದೆ. ಅವರ ಪಕ್ಷದವರೇ ಅವರ ವಿರುದ್ಧ ತಿರುಗಿ ಬೀಳಲಿದ್ದಾರೆ ಎಂದು ಹೇಳಿದರು.

Advertisement

ಜೆಡಿಎಸ್‌ ಹಾಗೂ ಕಾಂಗ್ರೆಸ್‌ಗೆ ಮತ ಕೊಡುವ ಜನರಿಲ್ಲ. ಎರಡೂ ಪಕ್ಷಗಳು ಮತ್ತೆ ಒಂದಾಗುವುದಿಲ್ಲ. ಆದರೂ ಜನರಲ್ಲಿ ಗೊಂದಲ ಮೂಡಿಸಲು ಹೇಳಿಕೆ ಕೊಡುತ್ತಿದ್ದಾರೆ ಎಂದು ತಿಳಿಸಿದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಎಚ್‌.ಡಿ.ಕುಮಾರಸ್ವಾಮಿಯವರು ಆಡಿಯೋ ಬಿಡ್ತೇನೆ ಎಂದು ಹೆದರಿಸುತ್ತಿದ್ದಾರೆ. ಅವರ ಹೇಳಿಕೆಗೆಲ್ಲಾ ಹೆದರಲ್ಲ. ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಜನ ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಏಕೋಪಾಧ್ಯಾಯ ಶಾಲೆಯ ಮುಖ್ಯೋಪಾಧ್ಯಾಯ ಆಗಿದ್ದಾರೆ ಎಂದು ಲೇವಡಿ ಮಾಡಿದರು.

ಹನಿಟ್ರ್ಯಾಪ್‌ ಕುರಿತು ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಯಾರ್ಯಾರು ಹನಿ ಅನ್ನೋದು ಗೊತ್ತಿಲ್ಲ. ಯಾರು ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಊಹಾಪೋಹದ ಹೇಳಿಕೆಗಳಿಗೆ ಕಿಮ್ಮತ್ತಿಲ್ಲ. ಇದಕ್ಕೂ ನಮಗೂ ಸಂಬಂಧವಿಲ್ಲ. ಅನರ್ಹರು ಹನಿಟ್ರ್ಯಾಪ್‌ನಲ್ಲಿ ಇರುವ ಬಗ್ಗೆಯೂ ನನಗೆ ಮಾಹಿತಿಯಿಲ್ಲ. ಸಿಸಿಬಿ ಅವರನ್ನೇ ನೀವು ಕೇಳಿ ಎಂದು ಮಾಧ್ಯಮದವರಿಗೆ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next