Advertisement
ದೋಡಾ ಜಿಲ್ಲೆಯಲ್ಲಿ ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂಬ ಗುಪ್ತಚರ ವರದಿ ಆಧರಿಸಿ ಸೇನೆಯು ಸ್ಥಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಸೇನೆಯೂ ಪ್ರತಿದಾಳಿ ನಡೆಸಿದೆ ಈ ವೇಳೆ ಕ್ಯಾಪ್ಟನ್ ದೀಪಕ್ ಸಿಂಗ್ ಅವರಿಗೆ ಗುಂಡು ತಗುಲಿ ಗಂಭೀರ ಗಾಯಗೊಂಡು ವೀರ ಮರಣ ಹೊಂದಿದ್ದಾರೆ. ವರದಿಗಳ ಪ್ರಕಾರ, ನಾಲ್ಕು ಶಂಕಿತ ಭಯೋತ್ಪಾದಕರ ಗುಂಪು ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿತು. ಈ ವೇಳೆ ಸ್ಥಳೀಯ ನಿವಾಸಿಯೊಬ್ಬರೂ ಗಾಯಗೊಂಡಿದ್ದಾರೆ.
Related Articles
Advertisement
ಅಧಿಕಾರಿಗಳ ಸಭೆಇದೀಗ ಸ್ವಾತಂತ್ರ್ಯ ದಿನಾಚರಣೆಯ ಒಂದು ದಿನ ಮೊದಲು ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ ನಡೆದು ಕ್ಯಾಪ್ಟನ್ ಹುತಾತ್ಮರಾದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ನಿಯಂತ್ರಿಸಲು ರಕ್ಷಣಾ ಸಚಿವರ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಯಿತು. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.