ಶ್ರೀನಗರ: ಜಮ್ಮು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಓರ್ವ ಪಾಕ್ ನುಸುಳುಕೋರ ಉಗ್ರನನ್ನು ಸೆರ ಹಿಡಿದು, ಓರ್ವನನ್ನು ಹತ್ಯೆ ಮಾಡಲಾಗಿದೆ.
ಪಾಕ್ ನುಸುಳುಕೋರರನ್ನು ತಡೆಯಲು ಭಾರತೀಯ ಸೇನೆ ಸೆ.18ರಿಂದ ಸತತ ಕಾರ್ಯಾಚರಣೆ ನಡೆಸುತ್ತಿದೆ. ಕಳೆದೆರಡು ದಿನದಲ್ಲಿ ಮೂರು ಕಡೆ ಅಕ್ರಮ ನುಸುಳುವಿಕೆಯನ್ನು ಪತ್ತೆ ಮಾಡಲಾಗಿದೆ.
ಲೈನ್ ಆಫ್ ಕಂಟ್ರೋಲ್ ನ ಉರಿ ಸೆಕ್ಟರ್ ನಲ್ಲಿ ನುಸುಳುಕೋರರ ಉಗ್ರರು ಮತ್ತು ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಉಗ್ರರ ದಾಳಿಗೆ ಭದ್ರತಾ ಪಡೆಗಳು ಮರುದಾಳಿ ನಡೆಸಿದೆ. ಈ ವೇಳೆ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದರೆ, ಮತ್ತೋರ್ವನನ್ನು ಸೆರೆ ಹಿಡಿಯಲಾಗಿದೆ. ಘಟನೆಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಸಾಮೂಹಿಕ ನಾಯಕತ್ವದಲ್ಲಿ ಉಪ ಚುನಾವಣೆಯಲ್ಲಿ ಚರ್ಚೆ: ಎಚ್.ಡಿ.ಕುಮಾರಸ್ವಾಮಿ
ಕಳೆದ ವಾರ ಸೇನೆಯು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಎಲ್‌ಒಸಿ ಬಳಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿತ್ತು. ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿತ್ತು.