ನವದೆಹಲಿ: ಜಮ್ಮು-ಕಾಶ್ಮೀರದ ಉಧಾಂಪುರ್ ಜಿಲ್ಲೆಯ ಶಿವ್ ಗಢ್ ಧಾರ್ ಪ್ರದೇಶದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಮಂಗಳವಾರ(ಸೆಪ್ಟೆಂಬರ್ 21) ಪತನಗೊಂಡಿದ್ದು, ಘಟನೆಯಲ್ಲಿ ಇಬ್ಬರು ಪೈಲಟ್ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ
ಶಿವ್ ಗಢ್ ಧಾರ್ ಪ್ರದೇಶದಲ್ಲಿ ದಟ್ಟ ಮಂಜು ಕವಿದ ವಾತಾವರಣ ಇದ್ದ ಪರಿಣಾಮ ದಾರಿ ಸ್ಪಷ್ಟವಾಗಿ ಗೋಚರವಾಗಿಲ್ಲ. ಇದರಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಪಡೆದ ಕೂಡಲೇ ಶಿವ್ ಗಢ್ ಧಾರ್ ಪ್ರದೇಶಕ್ಕೆ ತಂಡವನ್ನು ಕಳುಹಿಸಲಾಗಿದೆ. ಪ್ರದೇಶದಲ್ಲಿನ ದಟ್ಟ ಮಂಜು ಕವಿದ ವಾತಾವರಣದ ಪರಿಣಾಮ ಯಾವುದು ಸ್ಪಷ್ಟವಾಗಿ ಗೋಚರಿಸುತ್ತಿಲ್ಲ ಎಂದು ಉಧಾಂಪುರ್ ಸುಲೇಮಾನ್ ಚೌಧರಿ ಮಾಹಿತಿ ನೀಡಿದ್ದಾರೆ.
ರಕ್ಷಣಾ ತಂಡ ಕೂಡಾ ಸ್ಥಳೀಯರ ನೆರವಿನೊಂದಿಗೆ ಘಟನಾ ಸ್ಥಳಕ್ಕೆ ತೆರಳಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಯೋಧರನ್ನು ಸ್ಥಳಾಂತರಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಪೈಲಟ್ ಗಳನ್ನು ಆಸ್ಪತ್ರೆಗೆ ಕರೆತರುವ ಮುನ್ನವೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿರುವುದಾಗಿ ವರದಿ ಹೇಳಿದೆ.
ಆಗಸ್ಟ್ 3ರಂದು ಜಮ್ಮು ಕಾಶ್ಮೀರದ ರಂಜಿತ್ ಸಾಗರ್ ದಾಮ್ ಸರೋವರದ ಸಮೀಪ ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನಗೊಂಡಿತ್ತು. ಈ ಬಗ್ಗೆ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.