ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಕುಪ್ವಾರ ಜಲಿಲೆಯಲ್ಲಿ ಪೊಲೀಸರು ಮತ್ತು ಸೇನಾ ಯೋಧರ ನಡುವೆ ಮಾರಾಮಾರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳು ಸೇರಿದಂತೆ 16 ಯೋಧರ ವಿರುದ್ಧ ದೂರು ದಾಖಲಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ನಟ ʼಪ್ರಜ್ವಲ್ ದೇವರಾಜ್ ಇನ್ನಿಲ್ಲʼ ಎನ್ನುವ ಪೋಸ್ಟರ್ ವೈರಲ್: ನಿಜಕ್ಕೂ ಆಗಿದ್ದೇನು?
ಘಟನೆಯಲ್ಲಿ ಠಾಣಾಧಿಕಾರಿ ಸೇರಿದಂತೆ ಐವರು ಪೊಲೀಸರು ಗಾಯಗೊಂಡಿರುವುದಾಗಿ ಮೂಲಗಳು ಹೇಳಿವೆ. ಯೋಧರ ಗುಂಪು ಏಕಾಏಕಿ ಪೊಲೀಸ್ ಠಾಣೆಯೊಳಗೆ ನುಗ್ಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪೊಲೀಸರ ಮೇಲೆ ಹಲ್ಲೆ ನಡೆಸಿರುವ ವರದಿಯನ್ನು ಸೇನಾಧಿಕಾರಿಗಳು ತಳ್ಳಿಹಾಕಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಸೇರಿದಂತೆ 16 ಸೈನಿಕರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
ಲೂಟಿ, ಕೊಲೆ ಯತ್ನ ಹಾಗೂ ಪೊಲೀಸರ ಅಪಹರಣ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ವಿವರಿಸಿದೆ. ಮಂಗಳವಾರ ಪೊಲೀಸರು ಕುಪ್ವಾರದ ಬಟ್ ಪೋರಾ ಗ್ರಾಮದಲ್ಲಿರುವ ಯೋಧರೊಬ್ಬರ ನಿವಾಸದ ಮೇಲೆ ದಾಳಿ ನಡೆಸಿದ್ದರು. ವರದಿಯ ಪ್ರಕಾರ, ಅಂದು ರಾತ್ರಿ 9-40ರ ಹೊತ್ತಿಗೆ ಯೋಧರ ಪಡೆ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿರುವುದಾಗಿ ಎಫ್ ಐಆರ್ ನಲ್ಲಿ ತಿಳಿಸಲಾಗಿದೆ.