Advertisement

ಜ.ಕಾಶ್ಮೀರ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಭದ್ರತಾ ಪಡೆಗಳು

04:02 PM Jul 25, 2020 | keerthan |

ಶ್ರೀನಗರ: ಜಮ್ಮು ಕಾಶ್ಮಿರದ ಕೇಂದ್ರ ಸ್ಥಾನ ಶ್ರೀನಗರದ ಹೊರವಲಯದಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

Advertisement

ಶ್ರೀನಗರದ ಹೊರವಲಯದ ರಂಭೀರ್ ಗಡ್ ಎಂಬಲ್ಲಿ ಈ  ಗುಂಡಿನ ಚಕಮಕಿ ನಡೆದಿದೆ. ಸದ್ಯ ಸ್ಥಳದಲ್ಲಿ ಅಡಗಿರುವ ಇತರ ಉಗ್ರರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಕಾರ್ಯಾಚರಣೆಯಲ್ಲಿ ಓರ್ವ ಭಾರತೀಯ ಯೋಧನೂ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ 92 ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಮ್ಮು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿದೆ. ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸ್ಥಳಕ್ಕೆ ಭೇಟಿ ನೀಡಿದಾಗ ಉಗ್ರರು ಗುಂಡು ಹಾರಿಸಿದ್ದಾರೆ. ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದ್ದು, ಇಬ್ಬರನ್ನು ಕೊಲ್ಲಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next