ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಭಿಂಬರ್ ಗಲಿ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆಯು ಭಯೋತ್ಪಾದಕನೊಬ್ಬನನ್ನು ಹತ್ಯೆ ಮಾಡಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಭಯೋತ್ಪಾದಕ ಒಳನುಸುಳಲು ಪ್ರಯತ್ನಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ತಕ್ಷಣ ಸೇನಾ ಪಡೆಗಳು, ಈ ಸಂಚನ್ನು ವಿಫಲಗೊಳಿಸಿ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದಾರೆ.
ಹತ್ಯೆಗೀಡಾದ ಉಗ್ರನಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಇದೇ ಮೊದಲ ಬಾರಿಗೆ ಪುರುಷರನ್ನು ಹಿಂದಿಕ್ಕಿದ ಸ್ತ್ರೀಯರು
ಇದರ ಮಧ್ಯೆ, ಅಕ್ಟೋಬರ್‌ನಲ್ಲಿ ಒಂಬತ್ತು ಸೈನಿಕರನ್ನು ಹತ್ಯೆಗೈದ ಭಟ್ಟಾ ದುರ್ರಿಯನ್ ಅರಣ್ಯದಲ್ಲಿ ಭಯೋತ್ಪಾದಕರ ಉಪಸ್ಥಿತಿಯನ್ನು ಭದ್ರತಾ ಪಡೆಗಳು ಶಂಕಿಸಿರುವುದರಿಂದ ಪೂಂಚ್ ಜಿಲ್ಲೆಯಲ್ಲಿ ಕೂಂಬಿಂಗ್ ಮತ್ತು ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಒಳನುಸುಳುವಿಕೆಯನ್ನು ಹೆಚ್ಚಿಸಲು ಪಾಕಿಸ್ತಾನದಿಂದ ಪ್ರಯತ್ನಗಳನ್ನು ಮಾಡಲಾಗುತ್ತಿದೆ, ಆದರೆ ಅವುಗಳಲ್ಲಿ ಹೆಚ್ಚಿನವು ವಿಫಲಗೊಳ್ಳುತ್ತಿವೆ ಎಂದು ದಿಲ್ಬಾಗ್ ಸಿಂಗ್ ಹೇಳಿದ್ದಾರೆ.