Advertisement

ಪುಲ್ವಾಮಾ ಎನ್‌ಕೌಂಟರ್‌: ಯೋಧ ಹುತಾತ್ಮ

12:59 AM Aug 13, 2020 | mahesh |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಮ್ರಾಜಿಪೋರಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಗೈಯ್ಯಲಾಗಿದ್ದು, ಈ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

Advertisement

ಉಗ್ರರು ಅವಿತಿರುವ ಸುಳಿವಿನ ಮೇರೆಗೆ ಪೊಲೀಸ್‌, ಸಿಆರ್‌ಪಿಎಫ್ ಹಾಗೂ ಸೇನೆ ಮಂಗಳವಾರ ಸಂಜೆ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದವು. ಅಷ್ಟರಲ್ಲಿ ಉಗ್ರರು ಏಕಾಏಕಿ ಗುಂಡು ಹಾರಿಸಿದ್ದು, ಈ ವೇಳೆ ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಒಬ್ಬ ಉಗ್ರನನ್ನು ಹತ್ಯೆಗೈಯ್ಯಲಾಗಿದ್ದು, ಆತನಿಂದ ಎಕೆ ಅಸಾಲ್ಟ್ ರೈಫ‌ಲ್‌, ಗ್ರೆನೇಡ್‌ಗಳು ಸೇರಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಈ ನಡುವೆ, ಬಂಡಿಪೋರಾ ಜಿಲ್ಲೆಯ ಹಾಜಿನ್‌ನಲ್ಲಿ ಪಾಕ್‌ ಮೂಲದ ಲಷ್ಕರ್‌ ಉಗ್ರರನ್ನು ಬುಧವಾರ ಬೆಳಗ್ಗೆ ಬಂಧಿಸಲಾಗಿದೆ. ಬಂಧಿತ ಅಖೀಬ್‌ ಅಹ್ಮದ್‌ ರಾಥರ್‌ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನೂ ವಶಪಡಿಸಿಕೊಳ್ಳ ಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next