Advertisement

Jammu -Kashmir: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

01:02 PM Jul 07, 2023 | Team Udayavani |

ಶ್ರೀನಗರ: ಜಮ್ಮು -ಕಾಶ್ಮೀರದ ಸಾಂಬಾ ಜಿಲ್ಲೆಯ ಶಿಬಿರವೊಂದರಲ್ಲಿ ಸೇನಾ ಯೋಧನೊಬ್ಬ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಮೆಹಶ್ವರ್ ಸೇನಾ ಶಿಬಿರದಲ್ಲಿ ಈ ಘಟನೆ ನಡೆದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಯೋಧನನ್ನು ಮಹಾರಾಷ್ಟ್ರದ ಡೊಂಬಲ್ ಮಯೂರ್ ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ನಿನ್ನೆಯಷ್ಟೇ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿರುವ ಚಿಲ್ಲಾಯಾರಿ ಗಡಿ ಪೋಸ್ಟ್‌ನಲ್ಲಿ ಬಿಎಸ್‌ಎಫ್ ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next