Advertisement

ಕದನ ವಿರಾಮ ಉಲ್ಲಂಘಿಸಿ ಪಾಕ್ ಸೇನೆಯಿಂದ ಗುಂಡಿನ ದಾಳಿ: ಭಾರತೀಯ ಯೋಧ ಹುತಾತ್ಮ

03:06 PM Aug 30, 2020 | Mithun PG |

ಜಮ್ಮು ಕಾಶ್ಮೀರ:  ಕದನ ವಿರಾಮ ಉಲ್ಲಂಘಿಸಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.

Advertisement

ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ. ಪರಿಣಾಮವಾಗಿ ಭಾರತೀಯ ಸೇನೆಯ ಕಿರಿಯ ನಿಯೋಜಿತ ಅಧಿಕಾರಿ  (ಜೆಸಿಒ) ಹುತಾತ್ಮರಾಗಿದ್ದಾರೆ.

ಪಾಕಿಸ್ತಾನದ ಸೇನೆ ಇಂದು ಬೆಳಿಗ್ಗೆ ನೌಶೇರಾದ ಕಲ್ಸಿಯಾನ್, ಖಂಗರ್, ಭವಾನಿ ಪ್ರದೇಶಗಳನ್ನು  ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಿತ್ತು. ಈ ವೇಳೆ ಭಾರತೀಯ ಯೋಧರೊಬ್ಬರಿಗೆ ಗಂಭೀರ ಗಾಯಗಳಾಗಿದ್ದವು.  ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ ಎಂದು ವರದಿ ತಿಳಿಸಿದೆ.

ಭಾರತೀಯ ಸೇನೆ ಕೂಡ ಗುಂಡಿನ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next