Advertisement

ಭಾರತೀಯ ಸೇನೆಯ ಕ್ಷಿಪ್ರ ಕಾರ್ಯಾಚರಣೆ; ಕಣಿವೆಯಲ್ಲಿ 60 ಜೈಷ್ ಉಗ್ರರು!

10:20 AM Feb 18, 2019 | Sharanya Alva |

ನವದೆಹಲಿ: ಕಾಶ್ಮೀರ ಕಣಿವೆಯಲ್ಲಿ ಜೈಷ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ 60 ಮಂದಿ ಉಗ್ರರು ಕಾರ್ಯಾಚರಿಸುತ್ತಿದ್ದು, ಅದರಲ್ಲಿ 35 ಉಗ್ರರಿಗೆ ಉನ್ನತ ತರಬೇತಿ ನೀಡಲಾಗಿದೆ ಎಂದು ಭಾರತೀಯ ಸೇನೆಯ ಮೂಲಗಳು ತಿಳಿಸಿರುವುದಾಗಿ ಮಾಧ್ಯಮದ ವರದಿ ಹೇಳಿದೆ.

Advertisement

ಅಷ್ಟೇ ಅಲ್ಲ ಪುಲ್ವಾಮ ಘಟನೆಯ ಬಳಿಕ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆ ಬಳಿ ಬಿಗಿ ಭದ್ರತೆ ಏರ್ಪಡಿಸಿದ್ದು, ಹೈ ಅಲರ್ಟ್ ಆಗಿರುವುದಾಗಿ ವಿವರಿಸಿದೆ. ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಭಾರತೀಯ ಸೇನೆಯ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವರದಿ ತಿಳಿಸಿದೆ.

ಕಾಶ್ಮೀರ ಕಣಿವೆ ಪ್ರದೇಶದಲ್ಲಿನ ಬೆಳವಣಿಗೆಯ ಬಗ್ಗೆಯೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಸರ್ಕಾರಿ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಹೇಳಿದೆ. ಕಾಶ್ಮೀರ ಕಣಿವೆಯಲ್ಲಿ ಅಡಗಿರುವ ಜೈಷ್ ಉಗ್ರರನ್ನು ಸಂಪೂರ್ಣವಾಗಿ ಸದೆ ಬಡಿಯುವ ನಿಟ್ಟಿನಲ್ಲಿ ಭಾರತೀಯ ಸೇನೆ ನಿರತವಾಗಿದೆ. ಅಲ್ಲದೇ ಆ ಪ್ರದೇಶದಲ್ಲಿರುವ ನಾಗರಿಕರ ರಕ್ಷಣೆಗೆ ಬೇಕಾದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸೇನೆಯ ಮೂಲಗಳು ಖಚಿತಪಡಿಸಿರುವುದಾಗಿ ವರದಿ ವಿವರಿಸಿದೆ.

ಪುಲ್ವಾಮ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಸೋಮವಾರ ಕಾಶ್ಮೀರ ಕಣಿವೆಯಲ್ಲಿ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಮೇಜರ್ ಸೇರಿದಂತೆ ನಾಲ್ವರು ಉಗ್ರರು ಹುತಾತ್ಮರಾಗಿದ್ದಾರೆ. ಏತನ್ಮಧ್ಯೆ ಪುಲ್ವಾಮ ದಾಳಿಗೆ ಪ್ರತೀಕಾರ ಎಂಬಂತೆ ಭಾರತೀಯ ಸೇನೆಯ ಕಾರ್ಯಾಚರಣೆಗೆ ದಾಳಿಯ ಮಾಸ್ಟರ್ ಮೈಂಡ್ ಘಾಜಿ ರಶೀದ್ ನನ್ನು ಹೊಡೆದುರುಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next