ನವ ದೆಹಲಿ : ದೆಹಲಿಯ ಭಾರತೀಯ ಸೇನಾ ಆಸ್ಪತ್ರೆಯಲ್ಲಿ ದೆಹಲಿ ಸರ್ಕಾರವು ಆಕ್ಸಿಜನ್ ಸರಬರಾಜು ಗಣನೀಯವಾಗಿ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯನ್ನು ಎದುರಿಸುತ್ತಿದೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡ ಆಸ್ಪತ್ರೆಗೆ ಸಂಬಂಧಿಸಿದ ಅಧಿಕಾರಿಯೊಬ್ಬರು, ಸದ್ಯದ ಮಟ್ಟಿಗೆ ಆಕ್ಸಿಜನ್ ಕೊರತೆಯಿಲ್ಲದಿದ್ದರೂ, ನಿತ್ಯ ಕಳಿಸುತ್ತಿರುವ ಆಕ್ಸಿಜನ್ ಪ್ರಮಾಣವನ್ನು ಕಡಿತಗೊಳಿಸಿರುವುದರಿಂದ ಮುಂದೆ ಕೋವಿಡ್ 19 ರೋಗಿಗಳ ಚಿಕಿತ್ಸೆಯಲ್ಲಿ ಗಂಭೀರ ಸಮಸ್ಯೆಗಳು ಉಂಟಾಗಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ : ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತ: ಮಂಡ್ಯದಲ್ಲಿ ಕೋವಿಡ್ ಸೋಂಕಿತ ಯುವಕ ಸಾವು
450 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಆಸ್ಪತ್ರೆಯನ್ನು ಇತ್ತೀಚೆಗೆ ಕೋವಿಡ್ ಆಸ್ಪತ್ರೆಯೆಂದು ಪರಿವರ್ತಿಸಲಾಗಿತ್ತು. ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯ ಸಮಸ್ಯೆಯನ್ನು ರಕ್ಷಣಾ ಸಚಿವಾಲಯದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚಿಸಲಾಗಿದ್ದು, ಸರಬರಾಜು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಆಕ್ಸಿಜನ್ ಪೂರೈಕೆಯಲ್ಲಿನ ಕಡಿತವು ಆಸ್ಪತ್ರೆಯಲ್ಲಿ ಈ ಮೊದಲು ಪಡೆಯುತ್ತಿದ್ದ ಶೇಕಡಾ 50 ರಷ್ಟಿದೆ ಎಂದು ಮೂಲವೊಂದು ತಿಳಿಸಿದೆ.
ಇದನ್ನೂ ಓದಿ : ಬೆಡ್ ಹಂಚಿಕೆಯಲ್ಲಿ ಭಾರೀ ಅವ್ಯವಹಾರ: ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ