Advertisement

“ಆರೋಗ್ಯ ಹಸ್ತ’ವಿಸ್ತರಣೆಗೆ ಕಾಂಗ್ರೆಸ್‌ ಚಿಂತನೆ

05:47 PM Sep 30, 2020 | Suhan S |

ದಾವಣಗೆರೆ: ಕೋವಿಡ್ ನಿಯಂತ್ರಣಕ್ಕೆ ಕೆಪಿಸಿಸಿ ಹಮ್ಮಿಕೊಂಡಿರುವ ಆರೋಗ್ಯ ಹಸ್ತ ಮತ್ತು ಕಿಟ್‌ ವಿತರಣೆ ಕಾರ್ಯಕ್ರಮವನ್ನು ಇತರೆ ರಾಜ್ಯಗಳಲ್ಲೂ ಅನುಷ್ಠಾನಕ್ಕೆ ತರಲು ಮುಖಂಡರು ರಾಜ್ಯದಿಂದ ವರದಿ ಪಡೆಯುತ್ತಿದ್ದಾರೆ ಎಂದು ಕೆಪಿಸಿಸಿ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ ಧ್ರುವನಾರಾಯಣ ತಿಳಿಸಿದ್ದಾರೆ.

Advertisement

ಮಂಗಳವಾರ ಸಹಕಾರ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಏರ್ಪಡಿಸಿದ್ದ ಆರೋಗ್ಯ ಹಸ್ತ ತರಬೇತಿ ಹಾಗೂ ಆರೋಗ್ಯ ಕಿಟ್‌ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 224 ವಿಧಾನ ಸಭಾ ಕ್ಷೇತ್ರದಲ್ಲಿಸುಮಾರು 6 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಹಸ್ತ ತರಬೇತಿ ಹಾಗೂ ಆರೋಗ್ಯ ಕಿಟ್‌ ವಿತರಣಾ ಕಾರ್ಯಕ್ರಮದ ಮೂಲಕ ಕೊರೊನಾ ನಿಯಂತ್ರಣ ಮತ್ತು ಮರಣ ಪ್ರಮಾಣ ಕಡಿಮೆ ಮಾಡುವ ಯತ್ನವನ್ನು ಕಾಂಗ್ರೆಸ್‌ ನಡೆಸುತ್ತಿದೆ ಎಂದರು.

ಯಾವುದೇ ಸರ್ಕಾರ ಮಾಡದಂತಹ ಕೆಲಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ನುರಿತ ವೈದ್ಯರಿಂದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 80-100 ಕೋವಿಡ್ ವಾರಿಯರ್ಸ್‌ಗಳಿಗೆ ತರಬೇತಿ ನೀಡಲಾಗುವುದು. ಪ್ರತಿ ಮನೆ ಮನೆಗೆ ತೆರಳಿ ಕೊರೊನಾ ಪರೀಕ್ಷೆಗೆ ಅಗತ್ಯ ಉಪಕರಣಗಳುಳ್ಳ ಕಿಟ್‌ ನೀಡಲಾಗುತ್ತಿದೆ. ಈ ಕೆಲಸದಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೆ 1 ಲಕ್ಷ ರೂ. ಮೊತ್ತದ ಗುಂಪು ವಿಮೆ ಮಾಡಿಸಲಾಗಿದೆ ಎಂದು ಹೇಳಿದರು.

ಮಾಜಿ ಸಂಸದ ಬಿ.ಎನ್‌. ಚಂದ್ರಪ್ಪ ಮಾತನಾಡಿ, ಲಾಕ್‌ಡೌನ್‌ನಲ್ಲಿ ಜನರು ತಮ್ಮ ಊರಿಗೆ ಹೋಗಲು ಪರದಾಡುತ್ತಿದ್ದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ .ಶಿವಕುಮಾರ್‌ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ 1 ಕೋಟಿ ರೂ. ಚೆಕ್‌ ನೀಡುವ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಿದರು. ಸರ್ಕಾರ ಮಾಡುವ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಬರೀ ಸುಳ್ಳುಗಳನ್ನು ಹೇಳುತ್ತಿದ್ದಾರೆಯೇ ಹೊರತು ಯಾವುದೇ ಕಾರ್ಯಕ್ರಮ ಮಾಡಿಲ್ಲ. ಕಳೆದ ಚುನಾವಣೆಯಲ್ಲಿ ಮೂರು ಬಾಂಬ್‌ ಹಾಕಿ 300 ಸ್ಥಾನ ಗೆದ್ದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಜಾರಿಗೊಳಿಸಿದ್ದ 160 ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಬೇಕು ಎಂದರು.

Advertisement

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಬಿ.ಮಂಜಪ್ಪ ಮಾತನಾಡಿ, ದಾವಣಗೆರೆ ಜಿಲ್ಲೆಯ ಪ್ರತಿ ಮನೆ ಮನೆಗೂ ಭೇಟಿ ನೀಡಿ ಕಾರ್ಯಕ್ರಮವನ್ನುಯಶಸ್ವಿಗೊಳಿಸುತ್ತೇವೆ ಎಂದು ಭರವಸೆ ನೀಡಿದರು. ಹರಿಹರ ಶಾಸಕ ಎಸ್‌. ರಾಮಪ್ಪ, ಮಾಜಿ ಶಾಸಕರಾದ ಎಚ್‌ .ಪಿ. ರಾಜೇಶ್‌, ಅಬ್ದುಲ್‌ ಜಬ್ಟಾರ್‌, ಕೆಪಿಸಿಸಿ ವಕ್ತಾರ ಡಿ.ಬಸವರಾಜ್‌, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಎಸ್‌. ಬಸವಂತಪ್ಪ, ಕೆ.ಎಚ್‌. ಓಬಳಪ್ಪ, ಮಾಜಿ ಅಧ್ಯಕ್ಷ ಡಾ|ವೈ. ರಾಮಪ್ಪ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಅನಿತಾಬಾಯಿ, ನಗರಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್‌, ಸದಸ್ಯರಾದ ದೇವರಮನಿ ಶಿವಕುಮಾರ್‌, ಚಮನ್‌ ಸಾಬ್‌, ಗಡಿಗುಡಾಳ್‌ ಮಂಜುನಾಥ್‌, ಮುಖಂಡ ಸೈಯದ್‌ ಸೈಪುಲ್ಲಾ ಇತರರು ಇದ್ದರು. ಡಾ| ಉಮೇಶ್‌ಬಾಬು ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next