Advertisement

ಉಡುಪಿ, ಕುಂದಾಪುರದಲ್ಲಿ ಆರೋಗ್ಯ ಮೇಳ

01:30 AM Apr 24, 2022 | Team Udayavani |

ಉಡುಪಿ/ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಉಡುಪಿ ಮತ್ತು ಕುಂದಾಪುರದಲ್ಲಿ ಜಿಲ್ಲಾಡಳಿತ, ಜಿ.ಪಂ., ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆ, ಜಿಲ್ಲಾ ಆಯುಷ್‌ ವಿಭಾಗ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಇತರ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಶನಿವಾರ ನಡೆದ ತಾಲೂಕು ಆರೋಗ್ಯ ಮೇಳಗಳನ್ನು ಉದ್ಘಾಟಿಸಿದ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಆರೋಗ್ಯ ಕಾಳಜಿ ವಹಿಸಬೇಕಾದ ಅಗತ್ಯವನ್ನು ತಿಳಿಹೇಳಿದರು.

Advertisement

ಕ್ರಮವಾಗಿ ಶಾಸಕರಾದ ಕೆ. ರಘುಪತಿ ಭಟ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಆಹಾರ ಮತ್ತು

ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್‌ ಕುಮಾರ್‌ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ., ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ನಾಗಭೂಷಣ್‌ ಉಡುಪ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next