Advertisement

ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್‍ಗೆ ದಾಖಲಾದ ಆರೋಗ್ಯ ಮೇಳ

09:07 PM May 14, 2022 | Team Udayavani |

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯೂ ಮಾತ್ರವಲ್ಲದೆ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದ ನಗರದ ಬೃಹತ್ ಆರೋಗ್ಯ ಮೇಳ ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್‍ಗೆ ದಾಖಲಾಗಿ ಹೊಸ ಇತಿಹಾಸವನ್ನು ಸೃಷ್ಟಿಸಿದೆ.

Advertisement

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವದಲ್ಲಿ ನಡೆದ ಬೃಹತ್ ಆರೋಗ್ಯ ಮೇಳ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದು ಇಡೀ ಜಿಲ್ಲೆಯಾದ್ಯಂತ ಸುಮಾರು ಒಂದು ಲಕ್ಷ ಹದಿನೈದು ಸಾವಿರ ಜನ ಆರೋಗ್ಯ ಮೇಳದಲ್ಲಿ ಭಾಗವಹಿಸಲು ಆನ್‍ಲೈನ್ ಮೂಲಕ ಹೆಸರುಗಳನ್ನು ನೊಂದಣಿ ಮಾಡಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್‍ನ ಸಂಸ್ಥೆಯ ಶಿಖಾಶರ್ಮ ಅವರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಪ್ರಮಾಣ ಪತ್ರವನ್ನು ವಿತರಿಸಿದರು.

ರಾಜ್ಯ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಹಾಗೂ ಡಾ.ಕೆ.ಸುಧಾಕರ್ ಫೌಂಡೇಶನ್ ಆಶ್ರಯದಲ್ಲಿ ನಡೆದ ಬೃಹತ್ ಆರೋಗ್ಯ ಮೇಳದಲ್ಲಿ ಎಲ್ಲಾ ವಿಧವಾದ ಖಾಯಿಲೆಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ತಜ್ಞ ವೈದ್ಯರು ಮತ್ತು ಸಿಬ್ಬಂದಿ ಆಗಮಿಸಿ ಜನರಿಗೆ ಚಿಕಿತ್ಸೆ ಮತ್ತು ಸೌಲಭ್ಯವನ್ನು ಅವಲೋಕನ ಮಾಡಿದ ಗಿನ್ನೀಸ್ ಬುಕ್ ಆಫ್ ವಲ್ಡ್ ರೆಕಾರ್ಡ್ ಸಂಸ್ಥೆಯವರು ದಾಖಲೆಯ ಪ್ರಮಾಣ ಪತ್ರವನ್ನು ಆರೋಗ್ಯ ಸಚಿವರಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ : ಕೊರಟಗೆರೆ ;ಅಧಿಕಾರಿಗಳಿಗೆ ಹಣದ ದಾಹ ಬಡವರಿಗೆ ನೀರಿನ ದಾಹ; ಕುಡಿಯುವ ನೀರಿನ ಘಟಕಗಳ ಕರ್ಮಕಾಂಡ

ವಿಶ್ವ ಮಟ್ಟದಲ್ಲಿ ಗಮನ ಸೆಳೆಯುವಂತೆ ಆರೋಗ್ಯ ಮೇಳವನ್ನು ಮಾಡಿ ಹೊಸ ದಾಖಲೆಯನ್ನು ನಿರ್ಮಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಅವರ ತಂಡಕ್ಕೆ ಅದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ಶ್ರೀ. ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನಕಾರ್ಯದರ್ಶಿ ಬಿಎಲ್ ಸಂತೋಷ್ ಜಿ ಅವರು ಅಭಿನಂಧಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next